ETV Bharat / state

ರಾಯಚೂರಿನಲ್ಲಿ ಭೀಕರ ಅಪಘಾತ: ಇಬ್ಬರು ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.

ರಾಯಚೂರಿನಲ್ಲಿ ಭೀಕರ ಅಪಘಾತ,Raichur road accident Three people killed
ರಾಯಚೂರಿನಲ್ಲಿ ಭೀಕರ ಅಪಘಾತ
author img

By

Published : Nov 27, 2019, 9:10 PM IST

Updated : Nov 27, 2019, 11:07 PM IST

ರಾಯಚೂರು: ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ 150Aನಲ್ಲಿ ಲಾರಿ-ಬೊಲೆರೋ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಜನ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋನಾಳ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ರಾಯದುರ್ಗ ಮೂಲದ ಹನುಮ್ಮವ ಗುರಿಕಾರ(50), ಚೆನ್ನಮ್ಮ ದುರಗಪ್ಪ(16) ಮೃತ ದುರ್ದೈವಿಗಳು.

ರಾಯಚೂರಿನಲ್ಲಿ ಭೀಕರ ಅಪಘಾತ

ಲಿಂಗಸೂಗೂರು ತಾಲೂಕಿನ ಭೂಪೂರು ಗ್ರಾಮವೊದರ ಪರಂಗಿ ಹಣ್ಣು ತೋಟಕ್ಕೆ ಕೂಲಿ ಕೆಲಸಕ್ಕಾಗಿ ರಾಯದುರ್ಗದಿಂದ 20 ಜನ ಕೂಲಿ ಕಾರ್ಮಿಕರು ತೆರಳಿದ್ದರು. ಕೂಲಿ ಕೆಲಸ ಮುಗಿಸಿಕೊಂಡು ವಾಪಾಸ್ ರಾಯದುರ್ಗಕ್ಕೆ ತೆರಳುವಾಗ ಮಾರ್ಗಮಧ್ಯೆ ಕಕ್ಕೇರಾಯಿಂದ ಸಿಂಧನೂರು ಕಡೆ ಭತ್ತ ಹೊತ್ತು ಸಾಗುತ್ತಿದ್ದ ಲಾರಿ, ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಾಯಗೊಂಡವರನ್ನ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗಮಧ್ಯೆ ಹನುಮ್ಮವ ಗುರಿಕಾರ ಹಾಗೂ ಚೆನ್ನಮ್ಮ ದುರಗಪ್ಪ ಮೃತಪಟ್ಟಿದ್ದಾರೆ. ಉಳಿದ 18 ಜನರ ಪೈಕಿ 12 ಜನರಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದೆ. 12 ಜನರನ್ನ ಹೆಚ್ಚಿನ ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದ 6 ಜನರಿಗೆ ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಬೊಲೆರೊ ವಾಹನ ಚಾಲಕ ರಾಯದುರ್ಗದ ಬಲವಂತಪ್ಪ ಹಾಗೂ ಲಾರಿ ಚಾಲಕ ಶಿವಶಂಕ್ರಪ್ಪ ವಿರುದ್ಧ ಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದರಿಂದ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರು ಸಂಚಾರವನ್ನ ಸುಗಮಗೊಳಿಸಿದ್ದಾರೆ.

Intro:¬ಸ್ಲಗ್: ಮೂವರು ಸಾವು
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 27-11-2019
ಸ್ಥಳ: ರಾಯಚೂರು
ಆಂಕರ್: ಲಾರಿ-ಬೊಲೆರೊ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಸ್ವಾನ್ನಪ್ಪಿರುವ 10ಕ್ಕೂ ಜನ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ.Body: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೌಡರು ಗ್ರಾಮದ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ಮೃತರು ಕೂಲಿ ಕೆಲಸಕ್ಕೆ ತೆರಳಿದ ಕೂಲಿ ಕಾರ್ಮಿಕರು ಎಂದು ಹೇಳಲಾಗುತ್ತಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಗಾಯಗೊಂಡಿರುವ 10ಕ್ಕೂ ಹೆಚ್ಚು ಜನರನ್ನು ಲಿಂಗಸೂಗೂರು ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. Conclusion:ಘಟನಾ ಸ್ಥಳಕ್ಕೆ ಹಟ್ಟಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Last Updated : Nov 27, 2019, 11:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.