ರಾಯಚೂರು: ಕೆರೆಗೆ ನೀರು ತರಲು ತೆರಳಿದ್ದ ಒಂದೇ ಮನೆಯ ಮೂವರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಿಂಧನೂರು ತಾಲೂಕಿನ ರೌಡಕುಂದ ಗ್ರಾಮದಲ್ಲಿ ಸಂಭವಿಸಿದೆ.
ರವಿಕುಮಾರ್(12), ನಾಗರಾಜ(9), ಕಾರ್ತಿಕ(6) ಮೃತಪಟ್ಟ ಬಾಲಕರೆಂದು ಎಂದು ಗುರುತಿಸಲಾಗಿದೆ. ಈ ಮೂವರು ಬಾಲಕರು ಒಂದೇ ಕುಟುಂಬದವರು ಎಂದು ತಿಳಿದು ಬಂದಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಮಕ್ಕಳ ಸಾವಿನಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಸಿಂಧನೂರು ಗ್ರಾಮೀಣ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.