ರಾಯಚೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ ನಾಯಕ ಪರವಾಗಿ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.
ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಜೊತೆ ಮಾಜಿ ಪ್ರಧಾನಿ ಎಚ್.ಡಿ ದೇವಗೌಡ, ಆಂಧ್ರ ಸಿಎಂ ಚಂದ್ರುಬಾಬು ನಾಯ್ಡು, ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಭಾಗಹಿಸಲಿದ್ದಾರೆ. ಇದಕ್ಕಾಗಿ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆಯ ಸಿದ್ದತೆ ನಡೆದಿದ್ದು, ಸುಮಾರು 50 ಸಾವಿರ ಜನರು ಸೇರುವ ನೀರಿಕ್ಷೆ ಇದೆ.
ಇನ್ನು ಯಾವುದೇ ತೊಂದರೆಯಾಗದಂತೆ ಬಿಗಿ ಪೊಲೀಸ್ ಪಹರೆ ನಿಯೋಜಿಸಲಾಗಿದ್ದು, ಕಾರ್ಯಕ್ರಮದ ಹಿನ್ನಲೆ ಕಾಂಗ್ರೆಸ್ ಮುಖಂಡರು ಸ್ಥಳದಲ್ಲೇ ಇದ್ದು, ಎಲ್ಲಾ ಸಿದ್ದತೆಗಳನ್ನ ಕೈಗೊಂಡಿದ್ದಾರೆ.