ETV Bharat / state

ರಾಯಚೂರು: ಟ್ರ್ಯಾಕರ್ ಪಲ್ಟಿಯಾಗಿ 15 ಮಂದಿಗೆ ಗಾಯ

ಟ್ರ್ಯಾಕ್ಟರ್ ಪಲ್ಟಿಯಾಗಿ 15 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಬ್ಬಣಕಲ್ ಗ್ರಾಮದ ಬಳಿ ಈ ಘಟನೆ ನಡೆದಿದೆ.

Raichur
: ಟ್ರ್ಯಾಕರ್ ಪಲ್ಟಿಯಾಗಿ 15 ಮಂದಿ ಕೂಲಿ ಕಾರ್ಮಿಕರಿಗೆ ಗಾಯ
author img

By

Published : Dec 24, 2020, 3:06 PM IST

ರಾಯಚೂರು: ಭತ್ತ ನಾಟಿ ಮಾಡಲು ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ 15 ಜನ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಆಸ್ಪತ್ರೆಗೆ ಭೇಟಿ ನೀಡಿದ ಸ್ಥಳೀಯ ಶಾಸಕ ರಾಜಾ ವೆಂಕಟಪ್ಪ ನಾಯಕ

ಜಿಲ್ಲೆಯ ಮಾನ್ವಿ ತಾಲೂಕಿನ ರಬ್ಬಣಕಲ್ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಭತ್ತವನ್ನು ನಾಟಿ ಮಾಡಲು ಟ್ರ್ಯಾಕ್ಟರ್​​ನಲ್ಲಿ ಕಾರ್ಮಿಕರು ತೆರಳುತ್ತಿದ್ದರು. ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದ ಮಾರ್ಗ ಮಧ್ಯೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ ಎನ್ನಲಾಗ್ತಿದೆ. ಪರಿಣಾಮ ಟ್ರ್ಯಾಕ್ಟರ್​ನಲ್ಲಿದ್ದ 15 ಮಂದಿ ಕಾರ್ಮಿಕರು ಗಾಯಗೊಂಡಿದ್ದರೆ. ಗಾಯಗೊಂಡವರಲ್ಲಿ 8 ಮಂದಿ ಕಾರ್ಮಿಕರನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ರವಾನಿಸಲಾಗಿದ್ದು, ಗಂಭೀರ ಗಾಯಗೊಂಡ 7 ಮಂದಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಓದಿ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ಕೊಲೆ ಮಾಡಿ ಎಸೆದಿರುವ ಶಂಕೆ

ಘಟನೆ ಬಗ್ಗೆ ಸುದ್ದಿ ತಿಳಿದ ಶಾಸಕ ರಾಜಾ ವೆಂಕಟಪ್ಪ ನಾಯಕ ಆಸ್ಪತ್ರೆಗೆ ಭೇಟಿ ನೀಡಿ ಕೂಲಿ ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಹೆಚ್ಚುವರಿ ಚಿಕಿತ್ಸೆಗೆ ರಿಮ್ಸ್​ಗೆ ರವಾನಿಸಿರುವ ಕೂಲಿ ಕಾರ್ಮಿಕರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ರಿಮ್ಸ್ ವೈದ್ಯರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.