ETV Bharat / state

ತುಂಗಭದ್ರಾ ಎಡದಂಡೆ ನಾಲೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೀರು ಕಳ್ಳತನ ಆರೋಪ - raichur news

ತುಂಗಭದ್ರಾ ಎಡದಂಡೆ ನಾಲೆ ವ್ಯಾಪ್ತಿಯಲ್ಲಿ 2.5 ಲಕ್ಷ ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ನೀರು ಬಳಸಿಕೊಂಡು ವ್ಯವಸಾಯ ಮಾಡಲಾಗುತ್ತಿದ್ದು, ಕೂಡಲೇ ಸರ್ಕಾರ ಅಕ್ರಮ ನೀರಾವರಿಗೆ ಬ್ರೇಕ್ ಹಾಕಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತುಂಗಭದ್ರಾ ಎಡದಂಡೆ ನಾಲೆ ಹಿತರಕ್ಷಣಾ ಸಮಿತಿ‌ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಎಚ್ಚರಿಕೆ ನೀಡಿದ್ದಾರೆ.

Tungabhadra water theft illegally
ತುಂಗಭದ್ರಾ ಎಡದಂಡೆ ನಾಲೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೀರು ಕಳ್ಳತನ ಆರೋಪ..!
author img

By

Published : Jun 24, 2020, 5:31 PM IST

ರಾಯಚೂರು: ತುಂಗಭದ್ರಾ ಎಡದಂಡೆ ನಾಲೆ ವ್ಯಾಪ್ತಿಯಲ್ಲಿ 2.5 ಲಕ್ಷ ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ನೀರು ಬಳಸಿಕೊಂಡು ವ್ಯವಸಾಯ ಮಾಡಲಾಗುತ್ತಿದೆ ಎಂದು ತುಂಗಭದ್ರಾ ಎಡದಂಡೆ ನಾಲೆ ಹಿತರಕ್ಷಣಾ ಸಮಿತಿ‌ ಆರೋಪಿಸಿದೆ.

ತುಂಗಭದ್ರಾ ಎಡದಂಡೆ ನಾಲೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೀರು ಕಳ್ಳತನ ಆರೋಪ

ರೈತರ ಹೊಲಗಳಿಗೆ ಎಡದಂಡೆ ನಾಲೆಯ ಮೂಲಕ ನೀರು ಪೂರೈಸಲಾಗುತ್ತದೆ. ಆದರೂ ಕೂಡ ಕಾರಟಗಿ, ವಡ್ಡಹಟ್ಟಿ ಹಾಗೂ ತುರವಿಹಾಳ ವ್ಯಾಪ್ತಿಯಲ್ಲಿ ನಾಲೆಯಿಂದ ಅಕ್ರಮವಾಗಿ ನೀರು ತೆಗೆದುಕೊಂಡು ವವ್ಯಸಾಯ ಮಾಡಲಾಗುತ್ತಿದೆ. ಇದರಿಂದ ಕೆಳಭಾಗದ ಮಾನವಿ, ರಾಯಚೂರು ತಾಲೂಕಿನ‌ ರೈತರಿಗೆ ನೀರು ದೊರೆತಿಲ್ಲ. ಹೀಗಾಗಿ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವು ಹೋರಾಟ ಮಾಡಲಾಗಿದ್ದು, ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಇತ್ತೀಚೆಗೆ ತುಂಗಭದ್ರಾ ಎಡದಂಡೆ ನಾಲೆ ಹಿತರಕ್ಷಣಾ ಸಮಿತಿ ಅಕ್ರಮ ನೀರಾವರಿ ವಿಕ್ಷಣೆಗೆ ತೆರಳಿದಾಗ, ದೊಡ್ಡ-ದೊಡ್ಡ ಪೈಪುಗಳು, ಪಂಪ್‌ಸೆಟ್‌ಗಳು, ಸಣ್ಣ ನಾಲೆಗಳನ್ನ ನಿರ್ಮಾಣ ಮಾಡಿಕೊಂಡು ಅಕ್ರಮವಾಗಿ ನೀರು ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ. ಈ ಅಕ್ರಮಕ್ಕೆ ನೀರಾವರಿ ಚುನಾಯಿತ ಪ್ರತಿನಿಧಿಗಳು, ಮಾಜಿ ಶಾಸಕ ಶಿವರಾಜ್ ತಂಗಡಗಿ, ಹಾಲಿ ಕಾಡಾ ಅಧ್ಯಕ್ಷ ಬಸವನಗೌಡ ತುರವಿಹಾಳ ಸೇರಿದಂತೆ ಅನೇಕರು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಸರ್ಕಾರ ಅಕ್ರಮ ನೀರಾವರಿಗೆ ಬ್ರೇಕ್ ಹಾಕಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತುಂಗಭದ್ರಾ ಎಡದಂಡೆ ನಾಲೆ ಹಿತರಕ್ಷಣಾ ಸಮಿತಿ‌ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.