ETV Bharat / state

ಬೈಕ್​​ಗೆ ಲಾರಿ ಡಿಕ್ಕಿ.. ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಸಾವು - ರಾಯಚೂರು

ಬೈಕ್​​ಗೆ ಲಾರಿ ಡಿಕ್ಕಿ- ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು-ರಾಯಚೂರು - ಲಿಂಗಸೂಗೂರು ರಾಜ್ಯ ಹೆದ್ದಾರಿ ಸಮೀಪ ಘಟನೆ.

road accident in Raichur
ಬೈಕ್​​ಗೆ ಲಾರಿ ಡಿಕ್ಕಿ
author img

By

Published : Jun 7, 2023, 8:41 AM IST

ರಾಯಚೂರು: ಬೈಕ್​​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು-ಲಿಂಗಸೂಗೂರು ರಾಜ್ಯ ಹೆದ್ದಾರಿಯಲ್ಲಿ ಬರುವ ಸಾಥ್ ಮೈಲ್ ಬಳಿ ನಡೆದಿದೆ. ಮೃತರನ್ನು ಹುಣಶ್ಯಾಳ ಹುಡಾ ಗ್ರಾಮದ ನಿವಾಸಿಗಳಾದ ಹನುಮೇಶ್ (30) ಹಾಗೂ ಆಂಜನೇಯ (35) ಎಂದು ಗುರುತಿಸಲಾಗಿದೆ.

ಇವರು ರಾಯಚೂರು ಕಡೆಯಿಂದ ಹುಣಿಶ್ಯಾಳ ಹುಡಾಕ್ಕೆ ಹೊರಟಿದ್ದರು. ಆದರೆ, ಮಾರ್ಗ ಮಧ್ಯೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ರಾಯಚೂರು ಗ್ರಾಮೀಣ ಪೊಲೀಸರು, ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬಸ್​ಗೆ ಬೈಕ್ ಡಿಕ್ಕಿ: ಖಾಸಗಿ ಬಸ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕು ಕುಂಸಿ ಗ್ರಾಮದ ಸಮೀಪ ಇತ್ತೀಚೆಗೆ ನಡೆದಿತ್ತು. ಕೆರೆ ಏರಿ ಮೇಲೆ ಶಿವಮೊಗ್ಗದಿಂದ ಶಿಕಾರಿಪುರ ಕಡೆಗೆ ಹೊರಟಿದ್ದ ಖಾಸಗಿ ಬಸ್​ಗೆ ಸಾಗರ ಕಡೆಯಿಂದ ಬರುತ್ತಿದ್ದ ಬೈಕ್ ನೇರವಾಗಿ ಡಿಕ್ಕಿ ಹೊಡೆದಿತ್ತು. ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ರಂಜಿತ್ (22) ಹಾಗೂ ಅನಿಲ್ (20) ಎಂಬುವವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.

ಅನಿಲ್ ಶಿವಮೊಗ್ಗದ ಪುರಲೆ ಬಡಾವಣೆಯ ನಿವಾಸಿ. ರಂಜಿತ್ ಶಿವಮೊಗ್ಗ ತಾಲೂಕು ಇಂದಿರಾ ನಗರದ ನಿವಾಸಿ. ಇಬ್ಬರು ಹೊಸನಗರದ ಮಾರಿಕಾಂಬ ಜಾತ್ರೆಗೆ ಹೋಗಿ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಬೈಕ್ ಅನ್ನು ವೇಗವಾಗಿ ಚಲಾಯಿಸಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿತ್ತು. ಬಸ್​ಗೆ ಡಿಕ್ಕಿ ಹೊಡೆದು ಗಾಯಾಳುಗಳಾಗಿ ಇಬ್ಬರು ರಕ್ತದ ಮಡುವಿನಲ್ಲಿ ಒದ್ದಾಡುವಾಗ ಆಸ್ಪತ್ರೆಗೆ ಸಾಗಿಸುವ ಯತ್ನ ಮಾಡಿದ್ರು ಸಹ ವಿಫಲವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಇದನ್ನೂ ಓದಿ: ಬಸ್​ಗೆ ಬೈಕ್ ಡಿಕ್ಕಿ.. ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಸಾವು

ನಿಂತಿದ್ದ ಲಾರಿಗೆ ಕ್ರೂಸರ್​ ಡಿಕ್ಕಿ: ನಿಂತಿದ್ದ ವಾಹನಕ್ಕೆ ಕ್ರೂಸರ್​ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಜನ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ(ಜೂ 6) ಸಂಭವಿಸಿದೆ. ಮುನೀರ್​ (40), ನಯಮ್ತ್ ಉಲ್ಲಾ​ (40), ಮೀಜಾ (50), ಮುದ್ದಸಿರ್ (12) ಮತ್ತು ಸುಮ್ಮಿ (13) ಸೇರಿದಂತೆ ಐವರು ಸಾವನ್ನಪ್ಪಿದ್ದರು. ಇವರು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ವೇಲಗೋಡು ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಕಲಬುರುಗಿಯಲ್ಲಿ ನಡೆಯುತ್ತಿರುವ ದರ್ಗಾ ಉರುಸ್​ ಜಾತ್ರೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ, ನಿಂತಿದ್ದ ಲಾರಿಗೆ ಇವರು ಪ್ರಯಾಣಿಸುತ್ತಿದ್ದ ಕ್ರೂಸರ್​ ವಾಹನ ಡಿಕ್ಕಿ ಹೊಡೆದಿದೆ. ವಾಹನದಲ್ಲಿ ಸುಮಾರು 18 ಜನರು ಪ್ರಯಾಣಿಸುತ್ತಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಇದನ್ನೂ ಓದಿ: ನಿಂತಿದ್ದ ಲಾರಿಗೆ ಕ್ರೂಸರ್​ ಡಿಕ್ಕಿ.. ಐವರ ಸಾವು, 13 ಜನರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.