ರಾಯಚೂರು: ಲಾರಿ ಹಾಗೂ ಟಾಟಾ ಏಸ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಸೋಮವಾರ ರಾತ್ರಿ ಜರುಗಿದೆ. ಟಾಟಾ ಏಸ್ ಚಾಲಕ ಇಶಾಖ್ ಅಲಿ (42), ವಿನಯಾ ಚುನ್ನಿ ಲಾಲಾ( 54) ಸಾವಿಗೀಡಾದವರು. ಮೃತರನ್ನ ಬೆಂಗಳೂರು ಮೂಲದವರೆಂದು ಗುರುತಿಸಲಾಗಿದೆ.
ಅಮರಾವತಿ ಕ್ರಾಸ್ನಲ್ಲಿ ರೋಡ್ ಹಂಪ್ ಇರುವುದರಿಂದ ರಾತ್ರಿ ಸಮಯದಲ್ಲಿ ಅತಿ ವೇಗವಾಗಿ ವಾಹನ ಚಲಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಮಾನವಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: 8 ವರ್ಷಗಳಿಂದ ನಾಪತ್ತೆಯಾಗಿದ್ದ ಡ್ರಗ್ಸ್ ಫೆಡ್ಲರ್ ಎನ್ಸಿಬಿ ಅಧಿಕಾರಿಗಳ ಬಲೆಗೆ