ರಾಯಚೂರು: ಉಸಿರಾಟದ ತೊಂದರೆ ಹಾಗೂ ಜ್ವರದಿಂದ ಬಳಲುತ್ತಿದ್ದ ನಗರದ 65 ವರ್ಷದ ವೃದ್ಧೆ ಹಾಗೂ ಸಿರವಾರ ಪಟ್ಟಣ 80 ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಗರದ 65 ವರ್ಷದ ವೃದ್ಧೆ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಸಿರವಾರದ ಪಟ್ಟಣದ ವೃದ್ಧೆ ಮೂರು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತ ವೃದ್ಧೆಯರಿಬ್ಬರು ಚಿಕಿತ್ಸೆಗೆ ದಾಖಲಾದಾಗ ಅವರ ಗಂಟಲು ದ್ರವವನ್ನ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಪರೀಕ್ಷೆಗೆ ರವಾನಿಸಲಾಗಿತ್ತು. ಪ್ರಯೋಗಾಲಯದ ವರದಿಯಲ್ಲಿ ಇಬ್ಬರಿಗೂ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಇಬ್ಬರಿಗೆ ಕೋವಿಡ್-19 ವಾರ್ಡ್ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ಕೋವಿಡ್-19 ಮಾರ್ಗಸೂಚಿ ಅನ್ವಯ ಮಾಡಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಈ ಎರಡು ಸಾವಿನಿಂದ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.