ETV Bharat / state

ರಾಯಚೂರು: ಒಂದೇ ವಾರದಲ್ಲಿ ಎರಡು ಪೋಕ್ಸೊ ಪ್ರಕರಣ ದಾಖಲು - ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ

ರಾಯಚೂರಿನಲ್ಲಿ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಅತಿಥಿ ಶಿಕ್ಷಕ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿದ್ದು, ಮತ್ತೊಂದರಲ್ಲಿ ವ್ಯಕ್ತಿ ಬಾಲಕಿ ಮೇಲೆ ಲೈಂಗಿಕ ದೌರ್ಜವ್ಯ ಎಸಗಿರುವ ಆರೋಪ ಕೇಳಿಬಂದಿದೆ.

Case under POCSO Act against teacher
ಲೈಂಗಿಕ ದೌರ್ಜವ್ಯ
author img

By

Published : Nov 25, 2022, 1:42 PM IST

ರಾಯಚೂರು: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಎರಡು ಪೋಕ್ಸೊ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ ಸಿರವಾರ ತಾಲೂಕಿನ ಮಾಚನೂರು ಗ್ರಾಮದಲ್ಲಿ 13 ವರ್ಷದ ವಿದ್ಯಾರ್ಥಿನಿಯನ್ನು ಅತಿಥಿ ಶಿಕ್ಷಕ ಪಾಲೇಶ್ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಮೂರು ದಿನಗಳ ನಂತರ ಅತಿಥಿ ಶಿಕ್ಷಕ ಹಾಗೂ ವಿದ್ಯಾರ್ಥಿನಿ ಪತ್ತೆಯಾಗಿದ್ದು, ಪೋಷಕರಿಗೆ ಬಾಲಕಿಯನ್ನು ಪೊಲೀಸರು ಒಪ್ಪಿಸಿದ್ದಾರೆ. ಇತ್ತ ಅತಿಥಿ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಬಾಲಕ-ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ.. ಆರೋಪಿಗೆ 30 ವರ್ಷ ಜೈಲು ಶಿಕ್ಷೆ

ಮತ್ತೊಂದು ಪ್ರಕರಣದಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಮಗುವನ್ನು ಮನೆಗೆ ಬಿಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎನ್ನಲಾಗಿದೆ. ಅಯ್ಯಪ್ಪ (45 ) ಎಂಬ ವ್ಯಕ್ತಿಯ ಮೇಲೆ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.