ರಾಯಚೂರು: ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮದ ಬಳಿಯ ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಈ ದುರಂತ ಸಂಭವಿಸಿದೆ. ರವಿಚಂದ್ರ (26), ಗಂಗಪ್ಪ (21) ನೀರುಪಾಲಾದ ಯುವಕರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ, ಇಬ್ಬರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.