ETV Bharat / state

ಪ್ರವಾಹದಿಂದ ರೈತರ ಬದುಕು ಬೀದಿಗೆ ಬಂದಿದೆ: ಉಮಾದೇವಿ

author img

By

Published : Oct 20, 2020, 6:35 PM IST

ಭೀಮಾ ನದಿ ಪ್ರವಾಹದಿಂದ ಸಾವಿರಾರು ಎಕರೆ ಭತ್ತ, ಹತ್ತಿ, ತೊಗರಿ ಸೇರಿದಂತೆ ಇತರ ಪ್ರಮುಖ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದೆ. ಪರಿಣಾಮ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ ಒತ್ತಾಯಿಸಿದ್ದಾರೆ.

Umadevi
ಉಮಾದೇವಿ

ರಾಯಚೂರು: ಭೀಮಾ ನದಿ ಪ್ರವಾಹದಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದ್ದು, ರೈತರ ಬದುಕು ಬೀದಿಗೆ ಬಂದಿದೆ. ಹೀಗಾಗಿ, ಸರ್ಕಾರ ಶೀಘ್ರವೇ ಪರಿಹಾರ ಒದಗಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಹಾಗೂ ಕೃಷ್ಣಾ ಭೀಮಾ ನದಿ ಪ್ರವಾಹದಿಂದ ಸಾವಿರಾರು ಎಕರೆ ಭತ್ತ, ಹತ್ತಿ, ತೊಗರಿ ಸೇರಿದಂತೆ ಇತರ ಪ್ರಮುಖ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದೆ. ಪರಿಣಾಮ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ನಂತರ ಮಾತನಾಡಿದ ಅವರು, ಮಸ್ಕಿ ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿಯ ದೇಹಕ್ಕಾಗಿ ಒಂದು ವಾರದ ಕಾಲ ಶೋಧನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕುಟುಂಬಕ್ಕೆ ಆಸರೆಯಾಗಿದ್ದ ಚನ್ನಬಸವ ಮಡಿವಾಳ ಅವರ ಅಗಲಿಕೆಯಿಂದ ಕುಟುಂಬದ ನಿರ್ವಹಣೆ ಕಷ್ಟಕರವಾಗುತ್ತಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.