ರಾಯಚೂರು: ತುಂಗಭದ್ರಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಮಾನ್ವಿ ತಾಲೂಕಿನ ದದ್ದಲ್ ಪನ್ನೂರು ಬಳಿಯ ತುಂಗಭದ್ರಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತುಂಗಭದ್ರಾ ಜಲಾಶಯಕ್ಕೆ ಹೆಚ್ಚುವರಿ ನೀರು ಹರಿದು ಬಂದಿರುವುದರಿಂದ ತುಂಗಭದ್ರಾ ನದಿಗೆ ಹೆಚ್ಚುವರಿ ನೀರನ್ನ ಹರಿದು ಬಿಡಲಾಗಿತ್ತು.
ಈ ವೇಳೆ ನೀರಿನಲ್ಲಿ ಶವ ತೇಲಿ ಬಂದಿದೆ ಎಂದು ಹೇಳಲಾಗುತ್ತಿದೆ. ಶವದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಯಾರು ಕ್ಯಾರೆ ಅನ್ನುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಈ ಸಂಬಂಧ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.