ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದ ಬಳಿಯ ನಾರಾಯಣಪುರ ಅಣೆಕಟ್ಟೆ ಹಿನ್ನೀರಿನಲ್ಲಿ ಶವವೊಂದು ಪತ್ತೆಯಾಗಿದೆ.
ಮೀನುಗಾರರು ಮತ್ತು ರೈತರು ನದಿಯ ಬಳಿ ಹೋದ ವೇಳೆ ಪ್ರವಾಹದಲ್ಲಿ ತೇಲಿಬಂದ ಅನಾಥ ಶವ ಕಾಣಿಸಿಕೊಂಡಿದೆ. ತಕ್ಷಣವೇ ವಾಟ್ಸ್ಆ್ಯಪ್ ಗ್ರೂಪ್ಗಳಿಗೆ ಹಾಕಿ ಗುರುತಿಸಿ ಸಂಬಂಧಿಕರಿಗೆ ಮಾಹಿತಿ ತಲುಪಿಸಲು ಮನವಿ ಮಾಡಿಕೊಂಡಿದ್ದಾರೆ.
ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಪ್ರವಾಹ ಹೆಚ್ಚಿದ್ದು, ಕೃಷ್ಣಾ, ಘಟಪ್ರಭಾ, ಮಲಪ್ರಭ ನದಿಗಳಲ್ಲಿ ಪ್ರವಾಹ ಹೆಚ್ಚಾಗಿದೆ.
ಘಟನಾ ಸ್ಥಳಕ್ಕೆ ಲಿಂಗಸುಗೂರು ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆ ನಂತರವೇ ಶವದ ಗುರುತು, ಸಂಬಂಧ, ಸಾವಿಗೆ ಕಾರಣ ತಿಳಿದು ಬರಲಿದೆ.