ರಾಯಚೂರು : ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ಕಲಮಲ ಗ್ರಾಮದ ಹೊರವಲಯದ ಬೆಟ್ಟದ ಬಳಿ ಈ ದುರ್ಘಟನೆ ಸಂಭವಿಸಿದೆ.
ಸುಮಾರು 26 ವರ್ಷದ ವ್ಯಕ್ತಿಯನ್ನ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಹತ್ಯೆಯಾದ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.