ರಾಯಚೂರು : ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ತಿರುಮಲೇಶ್ ಬೆಲ್ದಾರ್(30) ಹತ್ಯೆಗೊಳಗಾದ ವ್ಯಕ್ತಿಯೆಂದು ಗುರುತಿಸಲಾಗಿದ್ದು, ನಗರದ ದೇವಿನಗರ ಬಡಾವಣೆಯಲ್ಲಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿ ಬಳಿ ಘಟನೆ ನಡೆದಿದೆ. ಆದರೆ ಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ನೇತಾಜಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.