ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕು ಗುರುಗುಂಟಾ ಗ್ರಾಮದಲ್ಲಿ ಅವೈಜ್ಞಾನಿಕ ರಸ್ತೆ, ಚರಂಡಿ ನಿರ್ಮಾಣದ ಪರಿಣಾಮ ಬಹುತೇಕ ವಾರ್ಡ್ಗಳಲ್ಲಿ ಮಳೆ ಮತ್ತು ಚರಂಡಿ ನೀರು ಹಾಗೂ ಘನತ್ಯಾಜ್ಯ ಸಂಗ್ರಹಗೊಂಡು ದುರ್ನಾತ ಬೀರುವಂತಾಗಿದೆ.
ಗ್ರಾಮದ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಹಲವು ಯೋಜನೆಗಳಡಿ ಕೋಟ್ಯಂತರ ಹಣ ಖರ್ಚು ಮಾಡಲಾಗಿದೆ. ಆದರೆ, ಮೇಲುಸ್ತುವಾರಿ ಮತ್ತು ನಿರ್ವಹಣೆ ಸಮಸ್ಯೆ ಹಾಗೂ ಅವೈಜ್ಞಾನಿಕ ಕಾಮಗಾರಿಗಳಿಂದ ಬುಧವಾರ ರಾತ್ರಿ ಸುರಿದ ಮಳೆಗೆ ವೆಂಕಟೇಶ್ವರ ದೇವಸ್ಥಾನ ಸೇರಿ ಸುತ್ತಮುತ್ತಲ ಮನೆಗಳಿಗೆ ನೀರು ಹೊಕ್ಕು ಅಪಾರ ನಷ್ಟ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.