ರಾಯಚೂರು: ಕಿತ್ತೂರು ರಾಣಿ ಚೆನ್ನಮ್ಮ ಬೋಧಕರ ವಸತಿ ನಿಲಯದ ವಾಚ್‌ಮ್ಯಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವನನ್ನು ಆಂಧ್ರ ಪ್ರದೇಶದ ಕಡಪ ಮೂಲದ ರೆಡ್ಡಿಯೆಂದು ಹೇಳಲಾಗುತ್ತಿದೆ. ನವಲಕಲ್ ಗ್ರಾಮದ ಹೊರವಲಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಆಂಧ್ರದಿಂದ ಬಂದ ಈ ವ್ಯಕ್ತಿ ವಾಚ್‌ಮ್ಯಾನ್ ಕೆಲಸ ಮಾಡುತ್ತಿದ್ದ. ಇದೀಗ ಆತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸದ್ಯ ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.