ಲಿಂಗಸುಗೂರು: ಕೃಷ್ಣಾ ನದಿ ಪ್ರವಾಹದಿಂದ ಜಲಾವೃತಗೊಂಡಿದ್ದ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಸಂಚಾರಕ್ಕೆ ಮುಕ್ತವಾಗಿದೆ.
ನಾರಾಯಣಪುರ ಅಣೆಕಟ್ಟೆಯಿಂದ ಹೆಚ್ಚುವರಿ ನೀರು ಹರಿಬಿಟ್ಟಿದ್ದರಿಂದ ಮೂರು ದಿನಗಳಿಂದ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ ಹಂಚಿನಾಳ, ಯಳಗುಂದಿ, ಯರಗೋಡಿ, ಕಡದರಗಡ್ಡಿ ಸೇರಿದಂತೆ ನಡುಗಡ್ಡೆ ಪ್ರದೇಶಗಳ ಬಾಹ್ಯ ಸಂಪರ್ಕ ಕಡಿತಗೊಂಡಿತ್ತು.
ಕೃಷ್ಣಾ ನದಿ ಪ್ರವಾಹ ಕಡಿಮೆ ಆಗಿದ್ದರಿಂದ ಸಹಾಯಕ ಆಯುಕ್ತ ರಾಜಶೇಖರ ಡಂಬಳ, ಸಿಪಿಐ ಯಶವಂತ ಬಿಸನಳ್ಳಿ, ಶೀಲಹಳ್ಳಿ ಸೇತುವೆಗೆ ಭೇಟಿ ನೀಡಿ ಸುರಕ್ಷತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ನಾರಾಯಪುರ ಅಣೆಕಟ್ಟೆಯಿಂದ ಮಧ್ಯಾಹ್ನ 12 ಗಂಟೆಗೆ 11,6000 ಕ್ಯೂಸೆಕ್ ನೀರು ಹರಿಬಿಡಲಾಗಿದೆ.