ರಾಯಚೂರು: ಜಿಲ್ಲೆಯಲ್ಲಾದ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪರಿಹಾರಕ್ಕೆ ಮನವಿ ಮಾಡಲಾಗುವುದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಸಾವಿರಾರು ಎಕರೆ ಪ್ರದೇಶದ ಬೆಳೆ ನಾಶವಾಗಿದೆ. ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ರೈತರ ಸಮಸ್ಯೆಯನ್ನು ಆಲಿಸಿದ್ದೇನೆ. ಹಾನಿ ಕುರಿತು ವರದಿ ನೀಡಲು ಜಿಲ್ಲಾಧಿಕಾರಿ ಹಾಗೂ ಇತರೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನವೆಂಬರ್ ಅಂತ್ಯದೊಳಗೆ ಸರ್ವೇ ಕಾರ್ಯ ಮುಗಿಯಬೇಕು. ಡಿಸೆಂಬರ್ 1 ರಿಂದ ರೈತರಿಗೆ ಪರಿಹಾರ ನೀಡುವ ಕಾರ್ಯವಾಗಬೇಕು ಅಂತ ಸೂಚಿಸಿದ್ದೇನೆ ಎಂದರು.
ರೈತರ ಆತ್ಮಹತ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂದೇ ಮೃತ ರೈತರ ಕುಟುಂಬಕ್ಕೆ ಭೇಟಿ ಕೊಡುತ್ತೇನೆ. ನಂತರ ಸರ್ಕಾರದಿಂದ ಏನೆಲ್ಲ ಪರಿಹಾರ ತಲುಪಿಸಬೇಕೋ, ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು.
ಇದನ್ನೂ ಓದಿ: Shivamogga students protest: ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ದೌರ್ಜನ್ಯ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ವಿಧಾನ ಪರಿಷತ್ ಚುನಾವಣೆಯಲ್ಲಿ100ಕ್ಕೆ 100ರಷ್ಟು ನಾವೇ ಗೆಲ್ಲುತ್ತೇವೆ. ಒಟ್ಟು 6ಸಾವಿರ ಮತದಾರರಿದ್ದಾರೆ. ನಾವು ಸಂಘಟನಾತ್ಮಕವಾಗಿದ್ದೇವೆ. ಹೀಗಾಗಿ ನಮ್ಮ ಅಭ್ಯರ್ಥಿಯೇ ಗೆಲುವು ಸಾಧಿಸುತ್ತಾರೆ. ನಮ್ಮ ನಾಯಕರು ಸೂಚಿಸುವ ಅಭ್ಯರ್ಥಿ ಗೆಲ್ಲಿಸೋದು ನಮ್ಮ ಗುರಿ ಎಂದು ತಿಳಿಸಿದರು.