ETV Bharat / state

ಗುತ್ತಿಗೆ ಪದ್ಧತಿ ಕೈಬಿಡಲು ಆಗ್ರಹಿಸಿ ರಾಯಚೂರಿನಲ್ಲಿ ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ರಾಯಚೂರಿನ ನಗರಸಭೆ ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿ ಕೈಬಿಡಬೇಕು ಹಾಗೂ ನೇರ ವೇತನ ಪಾವತಿಸಿ, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿಗೆ ಕೈಗೊಂಡಿರುವ ಪೌರ ಕಾರ್ಮಿಕರು.

ವಿವಿಧ ಬೇಡಿಕೆ ಈಡೇರಿಸುವಂತೆ ಪೌರಕಾರ್ಮಿಕರ ಅನಿರ್ಧಿಷ್ಟಾವಧಿ ಹೋರಾಟ
author img

By

Published : Jun 2, 2019, 6:36 PM IST

ರಾಯಚೂರು : ನಗರಸಭೆ ಪೌರಕಾರ್ಮಿಕರ ವಿಷಯದಲ್ಲಿ ತನ್ನ ಮೊಂಡುತನ ಮುಂದುವರೆಸಿದೆ. ಪೌರಕಾರ್ಮಿಕರ ಗುತ್ತಿಗೆ ಪದ್ಧತಿ‌‌ ರದ್ದುಗೊಳಿಸಬೇಕು ಹಾಗೂ ನೇರ ವೇತನ ಪಾವತಿ ಮಾಡುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟವನ್ನು ಮೇ 28ರಿಂದ ಕೈಗೆತ್ತಿಕೊಂಡುರುವ ಪೌರಕಾರ್ಮಿಕರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ವಿವಿಧ ಬೇಡಿಕೆ ಈಡೇರಿಸುವಂತೆ ಪೌರಕಾರ್ಮಿಕರ ಅನಿರ್ಧಿಷ್ಟಾವಧಿ ಹೋರಾಟ

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಅನಿರ್ದಿಷ್ಟ ಧರಣಿ ಹಮ್ಮಿಕೊಂಡು ನಗರಸಭೆ ಆಡಳಿತ ಮಂಡಳಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಸ್ಯಾನಟರಿ ಇಲಾಖೆಯ ಪೌರ ಕಾರ್ಮಿಕರಿಗೆ 4 ತಿಂಗಳ ಬಾಕಿ ವೇತನ ಹಾಗೂ 70 ಜನ ಕಾರ್ಮಿಕರನ್ನು ಖಾಯಂಗೊಳಿಸಲು ಒತ್ತಾಯಿಸಿ ನಗರದಲ್ಲಿ 5 ದಿನಗಳಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಭಾನುವಾರ ಬೆಳಗ್ಗೆ ಇಬ್ಬರು ಪ್ರತಿಭಟನಾ ಕಾರ್ಮಿಕರು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾದರೂ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಎಂಬುದು ಪೌರಕಾರ್ಮಿಕರ ಆರೋಪ.

ಹೋರಾಟ ನಿರತ ಕಾರ್ಮಿಕರ ಆರೋಗ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತದ ಆದೇಶದ ಮೇರೆಗೆ ರಿಮ್ಸ್​ನ ಒಬ್ಬ ವೈದ್ಯ ಹಾಗೂ ಶುಶ್ರೂಕರನ್ನು ನೇಮಿಸಿ ತಪಾಸಣೆ ಮಾಡಿಸಲಾಗುತ್ತಿದೆ. ಪರಸ್ಪರ ಮಾತುಕತೆಯಾಗದೇ ಈ ಸಮಸ್ಯೆ ಬಗೆಹರಿಯುವುದಿಲ್ಲ. ಅಧಿಕಾರಿಗಳು, ಜಿಲ್ಲಾಡಳಿತ ಕೂಡಲೇ ಸ್ಪಂದಿಸದಿದ್ದರೆ ಹೋರಾಟದ ತೀವ್ರತೆ ಹೆಚ್ಚಾಗುತ್ತದೆ ಎಂದು ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಎಸ್.ಮಾರೆಪ್ಪ ಎಚ್ಚರಿಕೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.