ಲಿಂಗಸುಗೂರು (ರಾಯಚೂರು): ಅಪ್ರಾಪ್ತ ಬಾಲಕಿ ಅಪಹರಣ ನಡೆದಿರುವ ಕುರಿತು ಹಟ್ಟಿ ಚಿನ್ನದ ಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಾಲೂಕಿನ ಯಲಗಟ್ಟಾ ಗ್ರಾಮದಲ್ಲಿ ಕಳೆದ ಬುಧವಾರ ಮಧ್ಯಾಹ್ನ ಮನೆಯಿಂದ ಹೊರಗಡೆ ಹೋಗಿದ್ದ ಬಾಲಕಿ ಈವರೆಗೂ ಪತ್ತೆಯಾಗಿಲ್ಲ.
ಯಾರೋ ಅಪರಿಚಿತರು ಮಗಳನ್ನು ಅಪಹರಣ ಮಾಡಿದ್ದಾರೆ ಎಂದು ಬಾಲಕಿಯ ತಾಯಿ ದೇವಮ್ಮ ಹಟ್ಟಿ ಚಿನ್ನದ ಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪಿಎಸ್ಐ ಮುದ್ದುರಂಗಸ್ವಾಮಿ ಆರೋಪಿ ಹಾಗೂ ಅಪಹರಣಕ್ಕೆ ಒಳಗಾದ ಬಾಲಕಿಯ ಪತ್ತೆಗೆ ಬಲೆ ಬೀಸಿದ್ದಾರೆ.