ETV Bharat / state

ಸಿರವಾರದಲ್ಲಿ ಪ್ರೇಮಿಗಳ ದುರಂತ ಅಂತ್ಯ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವ ಜೋಡಿ! - Raichur crime news

ಯುವಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಿರವಾರ ತಾಲೂಕಿನಲ್ಲಿ ನಡೆದಿದೆ. ಹುಡುಗಿಗೆ ಬೇರೆಯವರೊಂದಿಗೆ ನಿಶ್ಚಿತಾರ್ಥ ನೆರವೇರಿತ್ತು ಎನ್ನಲಾಗ್ತಿದೆ. ಈ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

young-lovers-commit-suicide-by-consuming-poison-in-raichur
ವಿಷ ಸೇವಿಸಿ ಯುವ ಪ್ರೇಮಿಗಳು ಆತ್ಮಹತ್ಯೆ
author img

By

Published : Nov 11, 2020, 2:02 PM IST

Updated : Nov 11, 2020, 2:12 PM IST

ರಾಯಚೂರು: ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಿರವಾರ ತಾಲೂಕಿನ ಮಲ್ಲಟ ಗ್ರಾಮದ ಹೊರವಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಮಹೇಶ್(20), ಅಕ್ಷತಾ(19) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳೆಂದು ಗುರುತಿಸಲಾಗಿದೆ. ಇಬರಿಬ್ಬರು ಬೇರೆ ಬೇರೆ ಸಮುದಾಯಕ್ಕೆ ಸೇರಿದವರು ಎನ್ನಲಾಗ್ತಿದೆ. ಅಕ್ಷತಾ ನಿನ್ನೆ ಮನೆಯಿಂದ ತೆರಳಿದ್ದು, ರಾತ್ರಿಯಾದರೂ ಮನೆಗೆ ವಾಪಸ್​ ಆಗಿರಲಿಲ್ಲ. ಹೀಗಾಗಿ ಯುವತಿ ಪಾಲಕರು ಹುಡುಕಾಟ ನಡೆಸಿದ್ದು, ಗ್ರಾಮದ ಹೊರವಲಯದಲ್ಲಿ ಇಬ್ಬರ ಮೃತದೇಹಳು ಪತ್ತೆಯಾಗಿವೆ.

ಹಲವು ದಿನಗಳಿಂದ ಮಹೇಶ್ ಹಾಗೂ ಅಕ್ಷತಾ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಕೆಲ ದಿನಗಳ ಹಿಂದೆ ಅಕ್ಷತಾಗೆ ಆಕೆಯ ಮನೆಯವರು ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ತನಿಖೆ ಮುಂದುವರಿಸಿದ್ದಾರೆ.

Last Updated : Nov 11, 2020, 2:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.