ರಾಯಚೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕ ನರಳಾಡುತ್ತಿದ್ದರೂ ಮಾನವೀಯತೆ ಮರೆತ ಜನರು ವಿಡಿಯೋ ಮಾಡುತ್ತಾ ನೋಡುತ್ತಿದ್ದ ಅಮಾನವೀಯ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬ್ಯಾಗವಾಟ್ ಗ್ರಾಮದಲ್ಲಿ ನಡೆದಿದೆ.
ಸುಮಾರು ಒಂದು ತಾಸು ಕಳೆದ ಬಳಿಕ ಘಟನೆಯ ಬಗ್ಗೆ ಮಾಹಿತಿ ಪಡೆದ ಕುಟುಂಬಸ್ಥರು ಸ್ಥಳಕ್ಕಾಗಮಿಸಿ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ.
ಮೃತ ಯುವಕನನ್ನು ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದ ಸಿದ್ದಾರ್ಥ ಎಂದು ಗುರುತಿಸಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.