ರಾಮನಗರ: ಜಿಲ್ಲೆಯಲ್ಲಿ ಚನ್ನಪಟ್ಟಣ 15, ಕನಕಪುರ 14, ಮಾಗಡಿ 20 ಮತ್ತು ರಾಮನಗರದಲ್ಲಿ 51 ಪ್ರಕರಣಗಳು ಸೇರಿ ಒಟ್ಟು 100 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರನ್ನು ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದ್ದಾರೆ.
ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದುವರೆಗೆ ಜಿಲ್ಲೆಯಲ್ಲಿ 830 ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಚನ್ನಪಟ್ಟಣ 171, ಕನಕಪುರ 167, ಮಾಗಡಿ 218 ಮತ್ತು ರಾಮನಗರದಲ್ಲಿ 274 ಪ್ರಕರಣಗಳು ಸೇರಿವೆ.
ನಿನ್ನೆ 150 ಜನರು ಗುಣಮುಖರಾಗಿದ್ದು, ಈವರೆಗೆ ಒಟ್ಟು 479 ಜನರು ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 336 ಸಕ್ರಿಯ ಪ್ರಕರಣಗಳಿವೆ. ಕನಕಪುರ ಹಾಗೂ ರಾಮನಗರ ತಾಲೂಕಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.