ರಾಮನಗರ: ಜಿಲ್ಲೆಯಲ್ಲಿ ಇಂದು 106 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, ಈವರೆಗೆ 2,380 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. 703 ಮಾತ್ರ ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.
ಜಿಲ್ಲೆಯ ಚನ್ನಪಟ್ಟಣ- 28, ಮಾಗಡಿ -29, ಕನಕಪುರ -23, ರಾಮನಗರ ತಾಲ್ಲೂಕಿನಲ್ಲಿ 26 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಸೋಂಕಿತರನ್ನು ಚಿಕಿತ್ಸೆಗಾಗಿ ರಾಮನಗರದ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಚಿಕಿತ್ಸೆ ಫಲಕಾರಿಯಾಗದೆ ಚನ್ನಪಟ್ಟಣ ತಾಲ್ಲೂಕಿನಲ್ಲಿ ಕೋವಿಡ್ಗೆ ಓರ್ವ ಮೃತಪಟ್ಟಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು 27 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು 42 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,650 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಪತ್ತೆಯಾದ 2,380 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ 703 ಸಕ್ರಿಯ ಪ್ರಕರಣಗಳಿದ್ದು ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ತಿಳಿಸಿದ್ದಾರೆ.