ರಾಮನಗರ: ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಿ.ಆರ್.ಪಿ.ಸಿ ಸೆಕ್ಷನ್ 144 ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮೇ 4ರವರೆಗೆ ಸರ್ಕಾರದ ಆದೇಶಗಳಲ್ಲಿ ವಿವರಿಸಿರುವಂತೆ ಪೂರ್ವಾನುಮತಿಯನ್ನು ಪಡೆದಿರುವ ಮದುವೆ ಕಾರ್ಯಕ್ರಮಗಳ ಸಂದರ್ಭಗಳನ್ನು ಹೊರತುಪಡಿಸಲಾಗಿದೆ. ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ 4ಕ್ಕಿಂತ ಹೆಚ್ಚಿನ ಜನರು ಗುಂಪು ಗುಂಪಾಗಿ ಒಟ್ಟುಗೂಡುವುದನ್ನು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ. ಆದೇಶಿಸಿದ್ದಾರೆ.
ಯಾವುದೇ ವ್ಯಕ್ತಿ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಾಹಣಾ ಕಾಯ್ದೆ 2005ರ ಕಲಂ 51ರಿಂದ 60ರ ಜೊತೆಗೆ ಭಾರತಿಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.