ರಾಮನಗರ: ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾರ್ಭಟ ಮುಂದುವರಿದಿದ್ದು, 17 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 332 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದರು.
17 ಕೋವಿಡ್ ಪ್ರಕರಣಗಳಲ್ಲಿ ರಾಮನಗರ ತಾಲೂಕಿನಲ್ಲಿ 14, ಮಾಗಡಿ ತಾಲೂಕಿನಲ್ಲಿ 2, ಚನ್ನಪಟ್ಟಣ ತಾಲೂಕಿನಲ್ಲಿ 1 ಪ್ರಕರಣ ಕಂಡುಬಂದಿದೆ. ಸೋಂಕು ಕಾಣಿಸಿಕೊಂಡ ಎಲ್ಲರನ್ನೂ ಚಿಕಿತ್ಸೆಗಾಗಿ ರಾಮನಗರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು 12 ಜನರು ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 157 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸಾವಿನ ಸರಣಿ ಕೂಡ ಮುಂದುವರಿದಿದ್ದು, ಚಿಕಿತ್ಸೆ ಫಲಿಸದೇ ಮಾಗಡಿ ತಾಲೂಕಿನ 48 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.