ETV Bharat / state

ಒಂದು ವಾರದೊಳಗೆ ರಾಮನಗರದಲ್ಲಿ 240 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ : ಡಿಸಿಎಂ ಅಶ್ವತ್ಥನಾರಾಯಣ

ಸದ್ಯಕ್ಕೆ ಜಿಲ್ಲೆಯ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಆಕ್ಸಿಜನ್‌ ಬೆಡ್‌ಗಳ ಸಮಸ್ಯೆ ಇಲ್ಲ. ಆದರೂ ಮುನ್ನೆಚ್ಚರಿಕೆಯಿಂದ ಇಷ್ಟು ಹೊಸ ಬೆಡ್‌ಗಳನ್ನು ಹಾಕಲಾಗುತ್ತಿದೆ. ಅದೇ ರೀತಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಶಾಲೆ-ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆಯಲಾಗುತ್ತಿದೆ ಡಿಸಿಎಂ ಅಶ್ವತ್ಥನಾರಾಯಣ ತಿಳಿಸಿದರು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ
ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ
author img

By

Published : May 8, 2021, 8:25 AM IST

ರಾಮನಗರ : ಮುಂದಿನ ಒಂದು ವಾರದೊಳಗೆ ಜಿಲ್ಲಾ ಕೇಂದ್ರದಲ್ಲಿ 240 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು ಹಾಗೂ ಜಿಲ್ಲೆಯ ಒಟ್ಟು 62 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ತಲಾ ಒಂದೊಂದು ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು.

ಸಂಸದ ಡಿ.ಕೆ. ಸುರೇಶ್‌ ಹಾಗೂ ಜಿಲ್ಲೆಯ ಉನ್ನತ ಅಧಿಕಾರಿಗಳ ಜತೆ ವರ್ಚುವಲ್‌ ಸಭೆ ನಡೆಸಿದ ಡಿಸಿಎಂ, ರಾಮನಗರದ ಹೊಸ ಜಿಲ್ಲಾಸ್ಪತ್ರೆಯಲ್ಲಿ 120 ಹಾಗೂ ಕಂದಾಯ ಭವನದಲ್ಲಿ 120 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಸದ್ಯಕ್ಕೆ ಜಿಲ್ಲೆಯ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಆಕ್ಸಿಜನ್‌ ಬೆಡ್‌ಗಳ ಸಮಸ್ಯೆ ಇಲ್ಲ. ಆದರೂ ಮುನ್ನೆಚ್ಚರಿಕೆಯಿಂದ ಇಷ್ಟು ಹೊಸ ಬೆಡ್‌ಗಳನ್ನು ಹಾಕಲಾಗುತ್ತಿದೆ. ಅದೇ ರೀತಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಶಾಲೆ-ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆಯಲಾಗುತ್ತಿದೆ. ಈಗಿನ ಅಂಕಿ-ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 2,800 ಸೋಂಕಿತರು ಮನೆಗಳಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರೆಲ್ಲರನ್ನೂ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಶಿಫ್ಟ್‌ ಮಾಡಲಾಗುವುದು ಎಂದು ಡಿಸಿಎಂ ಸಭೆಗೆ ತಿಳಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ವ್ಯವಸ್ಥೆ: ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 1,000 ಕೆಎಲ್‌ ಆಮ್ಲಜನಕ ಪೂರೈಸುವ ಘಟಕವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೆರವಿನಿಂದ ಸ್ಥಾಪನೆ ಮಾಡಲಾಗುತ್ತಿದೆ. ಪ್ರಾಧಿಕಾರವು 1.08 ಕೋಟಿ ರೂ. ನೆರವು ನೀಡುತ್ತಿದೆ. ಜತೆಗೆ, ಕನಕಪುರ, ಮಾಗಡಿ, ಚನ್ನಪಟ್ಟಣ ತಾಲೂಕು ಆಸ್ಪತ್ರೆಗಳಲ್ಲಿ 500 ಎಲ್‌ಎಂಪಿ ಆಕ್ಸಿಜನ್ ಪೂರೈಕೆ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಇವೆಲ್ಲ ಅತಿ ತ್ವರಿತವಾಗಿ ಕಾರ್ಯಗತವಾಗುತ್ತವೆ ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಗಂಭೀರ ಸೋಂಕಿತರ ಪರೀಕ್ಷೆಗೆ ಸಿಟಿ ಸ್ಕ್ಯಾನ್‌ ಮಾಡಲು ಖಾಸಗಿ ಆಸ್ಪತ್ರೆಗಳ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಜತೆಗೆ, ಜಿಲ್ಲಾಸ್ಪತ್ರೆಯಲ್ಲಿ ಟೊಯೋಟಾ ಕಿರ್ಲೋಸ್ಕರ್‌ ಕಂಪನಿ ನೆರವಿನಿಂದ ಸಿಟಿ ಸ್ಕ್ಯಾನ್‌ ಯಂತ್ರವನ್ನು ಸ್ಥಾಪಿಸಲಾಗುವುದು ಮಾಡಲಾಗುತ್ತಿದೆ ಎಂದು ಹೇಳಿದರು.

ಓದಿ : ಬುದ್ಧಿ ಹೇಳಿದ್ದಕ್ಕೆ ಸಿಟ್ಟು: ಅಪ್ಪ-ಅಮ್ಮನನ್ನೇ ಕೊಂದ 14 ವರ್ಷದ ಬಾಲಕ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.