ರಾಮನಗರ: ಜಿಲ್ಲೆಯಲ್ಲಿ ಗುರುವಾರದಂದು ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಚನ್ನಪಟ್ಟಣದಲ್ಲಿ ಒಂದು, ಕುಂಬಾರ ಬೀದಿಯ 23 ವರ್ಷದ ಯುವಕನಿಗೆ, 57 ವರ್ಷದ ಪಿ-3,313 ಸೋಂಕಿತನ ಮಗನಿಗೆ ಹಾಗೂ ಚನ್ನಪಟ್ಟಣ ತಾಲೂಕಿನ ಶ್ಯಾನುಭೋಗನಹಳ್ಳಿಯ 29 ವರ್ಷದ ಯುವಕನಿಗೆ ಸೋಂಕು ಪತ್ತೆಯಾಗಿದೆ. ಇವರನ್ನು ರಾಮನಗರ ಕಂದಾಯ ಭವನದ ಕೋವಿಡ್ ರೆಫೆರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚನ್ನಪಟ್ಟಣ ತಾಲ್ಲೂಕಿನ ಶ್ಯಾನುಭೋಗನಹಳ್ಳಿಯ 29 ವರ್ಷದ ಯುವಕ ರಾಮನಗರದ ಜಿಲ್ಲಾ ಕಾರಾಗೃಹದಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಪಾದರಾಯನಪುರದಲ್ಲಿ ಗಲಾಟೆ ಮಾಡಿದ್ದ ಆರೋಪಿಗಳನ್ನು ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಇವರಿಂದ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ.
ಶ್ಯಾನುಭೋಗನಹಳ್ಳಿಯನ್ನು ಇಂದು ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಒಟ್ಟು ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಸೋಂಕಿತರ ಟ್ರಾವೆಲ್ ಹಿಸ್ಟರಿ ಕಲೆ ಹಾಕುತ್ತಿದೆ.