ರಾಮನಗರ: ಜಿಲ್ಲೆಯಲ್ಲಿ ಇಂದು 57 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ತಿಳಿಸಿದ್ದಾರೆ
ಈ ಕುರಿತು ಮಾಹಿತಿ ನೀಡಿದ ಅವರು, ಇಂದು ಚನ್ನಪಟ್ಟಣ ತಾಲೂಕಿನಲ್ಲಿ- 21, ಮಾಗಡಿ -9, ಕನಕಪುರ -12, ರಾಮನಗರ ತಾಲೂಕಿನಲ್ಲಿ -15 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2783 ಕ್ಕೆ ಏರಿಕೆಯಾಗಿದೆ ಎಂದರು.
ಮೃತಪಟ್ಟವರ ವಿವರ:
ಇಂದು ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲೆಯಲ್ಲಿ ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಕನಕಪುರ ಹಾಗೂ ಮಾಗಡಿಯಲ್ಲಿ ತಲಾ ಒಂದೊಂದು ಸಾವಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 33 ಕ್ಕೇರಿದೆ ಎಂದರು.
ಗುಣಮುಖರಾದವರ ಮಾಹಿತಿ:
ಇಂದು ಜಿಲ್ಲೆಯಲ್ಲಿ 30 ಮಂದಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಒಟ್ಟು 1853 ಜನರು ಗುಣಮುಖರಾದಂತಾಗಿದೆ.ಇನ್ನು ಜಿಲ್ಲೆಯಲ್ಲಿ 897 ಸಕ್ರಿಯ ಪ್ರಕರಣಗಳಿವೆ.