ರಾಮನಗರ: ಜಿಲ್ಲೆಯಲ್ಲಿ ಒಟ್ಟು 60 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರನ್ನು ಜಿಲ್ಲೆಯ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದ್ದಾರೆ.
ಚನ್ನಪಟ್ಟಣ 6, ಕನಕಪುರ 27, ಮಾಗಡಿ 19 ಮತ್ತು ರಾಮನಗರ 8 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 6,008 ಪಾಸಿಟಿವ್ ಕೇಸ್ ದಾಖಲಾಗಿದ್ದು, 57 ಮಂದಿ ಸಾವಿಗೀಡಾಗಿದ್ದಾರೆ.
ಮಂಗಳವಾರ ಚನ್ನಪಟ್ಟಣದ 9, ಕನಕಪುರದ 12, ಮಾಗಡಿ 21 ಹಾಗೂ ರಾಮನಗರ ತಾಲೂಕಿನಲ್ಲಿ 16 ಜನ ಸೇರಿ ಒಟ್ಟಾರೆ 58 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 5162 ಜನರು ಚೇತರಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ದಾಖಲಾಗಿರುವ 6,008 ಪ್ರಕರಣಗಳ ಪೈಕಿ 5,162 ಜನರು ಗುಣಮುಖರಾಗಿದ್ದಾರೆ. 789 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.