ETV Bharat / state

ರಾಮನಗರ: ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ; ಹಲವರಿಗೆ ಉದ್ಯೋಗದ ನಿರೀಕ್ಷೆ - 75 crores released for high tech silk market in channapatna, ramanagar district

ಚನ್ನಪಟ್ಟಣದ ಸರ್ಕಾರಿ ರೇಷ್ಮೆ ತರಬೇತಿ ಸಂಸ್ಥೆಯ 20 ಎಕರೆ ಜಾಗದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್‌ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದೆ. ಇದಕ್ಕೆ ನಬಾರ್ಡ್‌ನಿಂದ ಆರ್ಥಿಕ ನೆರವು ದೊರೆತಿದೆ.

75 crores  released for high tech silk market in channapatna, ramanagar district
ರಾಮನಗರ: ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ; ಹಲವರಿಗೆ ಉದ್ಯೋಗದ ನಿರೀಕ್ಷೆ..
author img

By

Published : Jan 28, 2022, 6:09 PM IST

Updated : Jan 28, 2022, 6:52 PM IST

ರಾಮನಗರ: ಚನ್ನಪಟ್ಟಣದಲ್ಲಿ ರಾಮನಗರ-ಚನ್ನಪಟ್ಟಣ ಅವಳಿ ನಗರದ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದ್ದು, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದೆ.

ಚನ್ನಪಟ್ಟಣದ ಸರ್ಕಾರಿ ರೇಷ್ಮೆ ತರಬೇತಿ ಸಂಸ್ಥೆಯ 20 ಎಕರೆ ಜಾಗದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದೆ. ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ನಬಾರ್ಡ್‌ನಿಂದ ಆರ್ಥಿಕ ನೆರವು ದೊರೆತಿದ್ದು, 75 ಕೋಟಿ ರೂ. ಬಿಡುಗಡೆ ಕೂಡ ಆಗಿದೆ.

ರಾಮನಗರ: ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ; ಹಲವರಿಗೆ ಉದ್ಯೋಗದ ನಿರೀಕ್ಷೆ

3 ತಿಂಗಳೊಳಗೆ ಶಂಕುಸ್ಥಾಪನೆ..!
ರಾಮನಗರ ರೇಷ್ಮೆ ಮಾರುಕಟ್ಟೆಗೆ ರಾಜ್ಯದ ಹಲವು ಜಿಲ್ಲೆಗಳಿಂದ ರೇಷ್ಮೆಗೂಡನ್ನು ತೆಗೆದುಕೊಂಡು ರೈತರು ಬರುತ್ತಾರೆ. ಆದರೆ, ಹಲವು ವರ್ಷಗಳಿಂದ ರೇಷ್ಮೆ ಮಾರುಕಟ್ಟೆ ಚಿಕ್ಕ ಜಾಗದಲ್ಲಿರುವ ಕಾರಣ ಚನ್ನಪಟ್ಟಣಕ್ಕೆ ಶಿಫ್ಟ್ ಮಾಡಿ ಹೈಟೆಕ್ ಮಾರುಕಟ್ಟೆ ನಿರ್ಮಿಸಲಾಗುತ್ತದೆ. ಇದರಿಂದ ರೇಷ್ಮೆ ಬೆಳೆಗಾರರಿಗೆ ಅನುಕೂಲ ಆಗಲಿದೆ. ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ 3 ತಿಂಗಳೊಳಗೆ ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ.

ಹೈಟೆಕ್ ಮಾರುಕಟ್ಟೆಯಿಂದ ಹಲವರಿಗೆ ಉದ್ಯೋಗ
ಸದ್ಯ ರಾಮನಗರ ಮಾರುಕಟ್ಟೆಗೆ ಪ್ರತಿನಿತ್ಯ 40-50 ಟನ್ ರೇಷ್ಮೆ ಗೂಡು ಬರುತ್ತಿದ್ದು, ಹೈಟೆಕ್ ಮಾರುಕಟ್ಟೆ ನಿರ್ಮಾಣದ ಬಳಿಕ 100 ಟನ್‌ಗೂ ಅಧಿಕ ರೇಷ್ಮೆಗೂಡು ಬರುವ ನಿರೀಕ್ಷೆ ಇದೆ. ಏಷ್ಯಾದ ಅತೀ ದೊಡ್ಡ ರೇಷ್ಮೆ ಮಾರುಕಟ್ಟೆಯನ್ನು ಮತ್ತಷ್ಟು ಹೈಟೆಕ್ ಮಾಡುವುದರಿಂದ ಹಲವರಿಗೆ ಉದ್ಯೋಗ ಸೃಷ್ಟಿಯಾಗಲಿದೆ.

ಹೆಚ್‌ಡಿಕೆ ಬಹುದಿನಗಳ ಕನಸು ಈಡೇರಿಕೆ:
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೈಟೆಕ್ ಮಾರುಕಟ್ಟೆ ನಿರ್ಮಾಣ ಮಾಡಬೇಕೆಂಬ ಬಹುದಿನಗಳ ಕನಸಿತ್ತು. ಅದರಂತೆ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲೆ ಹೈಟೆಕ್ ರೇಷ್ಮೆ ಮಾರುಕಟ್ಟೆ ಮಾಡುವ ಕನಸು ಕಟ್ಟಿಕೊಂಡಿದ್ದರು. ಅದರಂತೆ ಬಿಜೆಪಿ ಸರ್ಕಾರದಲ್ಲಿ ಈ ಯೋಜನೆ ಜಾರಿಗೆಯಾಗಿದೆ. ಚನ್ನಪಟ್ಟಣ-ರಾಮನಗರ ಮದ್ಯ ಭಾಗದಲ್ಲಿ ಈ ಹೈಟೆಕ್‌ ಮಾರುಕಟ್ಟೆ ತಲೆ ಎತ್ತಲಿದೆ. ಅದಷ್ಟು ಬೇಗ ಕಾಮಗಾರಿ ಮುಗಿದು ರೈತರಿಗೆ ಅನುಕೂಲ ಆಗಲಿದೆ ಎಂದು ಹೆಚ್‌ಡಿಕೆ ತಿಳಿಸಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 28, 2022, 6:52 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.