ETV Bharat / state

ರಾಮನಗರ: ಕಾಡಾನೆ ದಾಳಿಯಿಂದ ರೈತ ಸಾವು - ರಾಮನಗರದಲ್ಲಿ ಕಾಡಾನೆ ದಾಳಿ

Elephant attack in Ramanagara: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದಲ್ಲಿ ಇಂದು ಬೆಳಗ್ಗೆ ಕಾಡಾನೆ ದಾಳಿಯಿಂದ ರೈತರೊಬ್ಬರು ಸಾವನ್ನಪ್ಪಿದ್ಧಾರೆ. ಈ ಬಗ್ಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್​ ಸೂಚನೆ ನೀಡಿದ್ದಾರೆ.

A Farmer Killed in Elephant attack in Ramanagara
ರಾಮನಗರ: ಕಾಡಾನೆ ದಾಳಿಯಿಂದ ರೈತ ಸಾವು
author img

By ETV Bharat Karnataka Team

Published : Dec 17, 2023, 10:25 AM IST

Updated : Dec 17, 2023, 3:36 PM IST

ರಾಮನಗರ: ಕಾಡಾನೆ ತುಳಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ. 63 ವರ್ಷದ ತಿಮ್ಮಯ್ಯ ಎಂಬುವರೇ ಮೃತ ರೈತರಾಗಿದ್ದು, ರೇಷ್ಮೆ ಕೃಷಿ ಮಾಡುತ್ತಿದ್ದರು.

ಗ್ರಾಮದ ಪಕ್ಕಕ್ಕೆ ರೇಷ್ಮೆ ಹುಳುವಿನ ಮನೆ ಹೊಂದಿದ್ದ ರೈತ ತಿಮ್ಮಯ್ಯ, ಇಂದು ಮುಂಜಾನೆ ಎದ್ದು ರೇಷ್ಮೆ ಹುಳುವಿಗೆ ಸೊಪ್ಪು ಹಾಕಲು ತೆರಳಿದ್ದರು. ನಂತರ ವಾಪಸ್ ಮನೆಗೆ ಬರುವ ವೇಳೆ ಕಾಡಾನೆ ದಾಳಿ ಮಾಡಿದೆ. ಈ ಆನೆ ದಾಳಿಗೆ ತಿಮ್ಮಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆ ಬಗ್ಗೆ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದರು. ಘಟನೆ ನಡೆದ ಸ್ಥಳವು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಗೆ ಒಳಪಟ್ಟಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಕೂಡಲೇ ಬರಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಆನೆ ದಾಳಿ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅರಣ್ಯ ಇಲಾಖೆ ಹೇಳುತ್ತಿದೆ. ಆದರೂ, ದಾಳಿಗಳು ಮಾತ್ರ ನಿರಂತರವಾಗಿ ಮುಂದುವರಿಯುತ್ತಲೇ ಇವೆ. ಇದೀಗ ಮತ್ತೊಬ್ಬ ರೈತ ಸಾವನ್ನಪ್ಪಿರುವುದು ರೈತ ವಲಯದಲ್ಲಿ ಆತಂಕವನ್ನು ಮೂಡಿಸಿದೆ. ಪದೇ ಪದೇ ಕನಕಪುರ ತಾಲೂಕಿನ ಗಡಿ ಗ್ರಾಮಗಳಲ್ಲಿ ನಿರಂತರವಾಗಿ ಆನೆ ದಾಳಿ ನಡೆಯುತ್ತಿದ್ದರೂ ಅರಣ್ಯಾಧಿಕಾರಿಗಳು ಶಾಶ್ವತ ಪರಿಹಾರ ಕಾರ್ಯ ಮಾತ್ರ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಮ ಕೈಗೊಳ್ಳಲು ಡಿಸಿಎಂ ಸೂಚನೆ: ಒಂಟಿ ಸಲಗ ದಾಳಿಯಿಂದ ಮೃತಪಟ್ಟಿರುವ ತಿಮ್ಮಪ್ಪ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ, ಅವರ ಮಗಳಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ತಮ್ಮ ಗೃಹ ಕಚೇರಿಯಿಂದ ಭಾನುವಾರ ದೂರವಾಣಿ ಮೂಲಕ ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ, 'ಗ್ರಾಮಸ್ಥರ ಬೇಡಿಕೆಯಂತೆ ಅಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಿ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಿ' ಎಂದು ಸೂಚಿಸಿದರು.

ಇದನ್ನೂ ಓದಿ: ರಾಮನಗರದಲ್ಲಿ ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ: ಒಬ್ಬರು ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

Last Updated : Dec 17, 2023, 3:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.