ರಾಮನಗರ: ಬೊಂಬೆನಗರಿ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮಕ್ಕೆ ನಟ ಅಭಿಷೇಕ್ ಅಂಬರೀಶ್ ಭೇಟಿ ನೀಡಿದರು. ಸರ್ಕಾರಿ ಶಾಲೆಯಲ್ಲಿ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ 800 ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಿದರು. ನಂತರ ಮಾತನಾಡಿದ ಅವರು, "ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬಟ್ಟೆ ವಿತರಣೆ ಮಾಡಿರುವುದು ಖುಷಿ ತಂದಿದೆ. ಇದು ಅಭಿಮಾನಿಗಳು ಮಾಡಿದ ಕಾರ್ಯಕ್ರಮ. ಇದರ ಸಂಪೂರ್ಣ ಕ್ರೆಡಿಟ್ ಅವರಿಗೇ ಸಲ್ಲಬೇಕು" ಎಂದರು.
ಸರ್ಕಾರಿ ಶಾಲೆಗಳ ಬೆಳವಣಿಗೆ ಬಗ್ಗೆ ನಾನು ಸರ್ಕಾರಕ್ಕೆ ಸಲಹೆ ಕೊಡುವಷ್ಟು ದೊಡ್ಡವನಲ್ಲ. ಆದರೆ, ಸರ್ಕಾರಿ ಶಾಲೆಗಳು ಉಳಿಯಬೇಕು. ಈ ಬಗ್ಗೆ ಚಿಂತಿಸಲಿ ಎಂದರು.
ಇದಲ್ಲದೆ, ಅಭಿಷೇಕ್ ರಾಜಕೀಯಕ್ಕೆ ಬರ್ತಾರಾ? ಎಂಬ ವಿಚಾರಕ್ಕೆ ಮಾತನಾಡಿದ ಅವರು, "ಪ್ರೀತಿಯಿದ್ದ ಕಡೆ ನಾನು ಇರುತ್ತೇನೆ. ಏನೇ ನಿರ್ಧಾರ ಮಾಡಿದರೂ ನಿಮಗೆ ಹೇಳಿಯೇ ಮಾಡ್ತೇನೆ. ಸದ್ಯಕ್ಕೆ ಬ್ಯಾಡ್ ಮ್ಯಾನರ್ಸ್ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ಕಾಳಿ ಚಿತ್ರದ ಜೊತೆಗೆ ಮತ್ತೊಂದು ಚಿತ್ರ ಇದೆ. ನಂತರ ರಾಜಕೀಯ ಹೋಗುವ ಸಂದರ್ಭ ಬಂದ್ರೆ ನಿಮಗೆ ಹೇಳಿಯೇ ಹೋಗುತ್ತೇನೆ" ಎಂದರು.
ಇದನ್ನೂ ಓದಿ: ಗೋಲ್ಡನ್ ಸ್ಟಾರ್ ಹುಟ್ಟುಹಬ್ಬಕ್ಕೂ ಮುನ್ನ ಗಾಳಿಪಟ-2 ಚಿತ್ರತಂಡದಿಂದ ಸ್ಪೆಷಲ್ ಗಿಫ್ಟ್