ETV Bharat / state

Ramanagara Accident: ನಿಂತಿದ್ದ ಲಾರಿಗೆ ಸ್ಕೂಟರ್​ ಡಿಕ್ಕಿ.. ದಂಪತಿ ಸಾವು

ಲಾರಿಗೆ ರಿಫ್ಲೆಕ್ಟರ್​ ಇಲ್ಲದ ಕಾರಣ ವೇಗವಾಗಿ ಬಂದ ಸ್ಕೂಟರ್​ ಡಿಕ್ಕಿ ಹೊಡೆದಿದೆ.

Husband and wife died
ನಿಂತಿದ್ದ ಲಾರಿಗೆ ಸ್ಕೂಟರ್​ ಡಿಕ್ಕಿ- ದಂಪತಿ ಸಾವು
author img

By

Published : Jun 29, 2023, 1:31 PM IST

ರಾಮನಗರ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ. ರಾಮನಗರ ಜಿಲ್ಲೆ ಬಿಡದಿ ಸಮೀಪದ ಕೆಂಪನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ್ದು, ಮೃತರನ್ನು ಸನಾವುಲ್ಲಾ ಬೇಗ್ (65) ಹಾಗೂ ನೂರ್‌ಜಹಾನ್ (60) ಎಂದು ಗುರುತಿಸಲಾಗಿದೆ. ಮೃತ ದಂಪತಿ ಬೆಂಗಳೂರಿನ ಬಾಪೂಜಿ ನಗರ ನಿವಾಸಿಗಳಾಗಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ರಾಮನಗರಕ್ಕೆ ಬಂದಿದ್ದ ಇಬ್ಬರು ಕಳೆದ ರಾತ್ರಿ ವಾಪಸ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೆಟ್ಟು ನಿಂತಿದ್ದ ಲಾರಿಗೆ ರಿಫ್ಲೆಕ್ಟರ್ ಇಲ್ಲದ ಕಾರಣ ವೇಗವಾಗಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿ ಡಿವೈಡರ್ ​ಗೆ ಸ್ಕೂಟರ್​ ಡಿಕ್ಕಿ- ಇಬ್ಬರು ಸಾವು: ಡಿವೈಡರ್​ ಗೆ ಸ್ಕೂಟರ್​ ಡಿಕ್ಕಿ ಹೊಡೆದು ಅಪ್ರಾಪ್ತ ವಯಸ್ಸಿನ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ಬುಧವಾರ ನಡೆದಿತ್ತು. ಬುಧವಾರ ರಾತ್ರಿ ವೇಳೆ ಇಬ್ಬರೂ ಮಂಗಳೂರು ನಗರದಿಂದ ಪದವಿನಂಗಡಿ ಕಡೆಗೆ ಸ್ಕೂಟರ್​ ನಲ್ಲಿ ಅತಿ ವೇಗವಾಗಿ ಹೋಗುತ್ತಿದ್ದು, ಮೇರಿಹಿಲ್​ ಬಳಿ ನಿಯಂತ್ರಣ ತಪ್ಪಿ ಸ್ಕೂಟರ್​ ಡಿವೈಡರ್​ ಗೆ ಡಿಕ್ಕಿಯಾಗಿತ್ತು. ಇಬ್ಬರಲ್ಲಿ ಒಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದು, ಇನ್ನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ನಿಯಂತ್ರಣ ತಪ್ಪಿ ಖಾಸಗಿ ಬಸ್​ ಪಲ್ಟಿ- ಇಬ್ಬರು ಸಾವು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​ ಒಂದು ಪಲ್ಟಿಯಾಗಿ, ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಮೀರಜ್​ ಗೆ ಹೋಗುತ್ತಿದ್ದ ಖಾಸಗಿ ಬಸ್​ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪಲ್ಟಿಯಾದ ಕಾರಣ ಬಸ್​ ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬ್ಯಾರಿಕೇಡ್​ಗೆ ಡಿಕ್ಕಿಯಾಗಿ ಕಂಟೈನರ್​ ಪಲ್ಟಿ: ಮುಂಜಾನೆ ನಿದ್ದೆಗಣ್ಣಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್​ ಲಾರಿ ಒಂದು ಬ್ಯಾರಿಕೇಡ್​ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಬೆಂಗಳೂರು- ಹೊಸೂರು ರಾಷ್ಟ್ರೀಯ ಹೆದ್ದಾರಿ ಅತ್ತಿಬೆಲೆ ಬಳಿ ಬುಧವಾರ ಮುಂಜಾನೆ ನಡೆದಿತ್ತು. ಘಟನೆಯಲ್ಲಿ ಕಂಟೈನರ್​ ಚಾಲಕ ಹಾಗೂ ಕ್ಲೀನರ್​ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಡಿವೈಡರ್​ಗೆ ಸ್ಕೂಟರ್ ಡಿಕ್ಕಿ.. ಅಪ್ರಾಪ್ತರಿಬ್ಬರ ದಾರುಣ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.