ರಾಮನಗರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಲ್ಲಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಮಾಲೀಕರು ಮಂಡ್ಯ ಮೂಲದವರು ಎನ್ನಲಾಗಿದ್ದು, ಸ್ಯಾಂಟ್ರೋ ಕಾರ್ ಕೆ.ಎ.05 -2781 ನಂಬರ್ನ ಕಾರು ಸಂಪೂರ್ಣ ಬೆಂಕಿಯ ಕೆನ್ನಾಲಿಗೆ ಸುಟ್ಟು ಭಸ್ಮವಾಗಿದೆ.
ಕಾರು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು ಎನ್ನಲಾಗಿದ್ದು, ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಲ್ಲಿದ್ದವರು ಕೆಳಗೆ ಇಳಿದ ತಕ್ಷಣವೇ ಕಾರು ಹೊತ್ತಿ ಉರಿಯಲಾರಂಭಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.