ರಾಮನಗರ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದ್ದು, ಮನೆಯಲ್ಲಿದ್ದ ಬಟ್ಟೆ, ಟಿವಿ, ಪ್ರಿಡ್ಜ್, ಅಮೂಲ್ಯ ಕಾಗದ ಪತ್ರಗಳು ಸೇರಿದಂತೆ ಮನೆಯ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಲಕ್ಕೋಜನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕೈಲಾಂಚ ಹೋಬಳಿಯ ಲಕ್ಕೋಜನಹಳ್ಳಿ ಗ್ರಾಮದ ಪುಟ್ಟಸ್ವಾಮಯ್ಯ ಎಂಬುವವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಮನೆ ಸಂಪೂರ್ಣ ಭಸ್ಮವಾಗಿದೆ. ಗೌರಮ್ಮ ಪುಟ್ಟಸ್ವಾಮಯ್ಯ ಮನೆಯವರು ರೇಷ್ಮೆ ತೋಟಕ್ಕೆ ರೇಷ್ಮೆ ಸೊಪ್ಪು ತರಲು ಮನೆಗೆ ಬೀಗ ಹಾಕಿ ಹೋದಾಗ ಘಟನೆ ನಡೆದಿದೆ. ಅಕ್ಕಪಕ್ಕದ ಮನೆಯವರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಫಲಕಾರಿಯಾಗಲಿಲ್ಲ.
ರಾಮನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.