ETV Bharat / state

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ಮೃತ ಪಟ್ಟ ವ್ಯಕ್ತಿ - Rowdisheeter Dilip death news

ಸದ್ಯ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೋರ್ವ ಆರೋಪಿ ಎಸ್ಕೇಪ್ ​ ಆಗಿದ್ದಾನೆ. ಎಸ್ಕೇಪ್ ಆಗಿರುವ ಆರೋಪಿಯ ಪತ್ತೆಗೆ ಪೊಲೀಸ್​ ಅಧಿಕಾರಿಗಳು ಬಲೆ ಬೀಸಿದ್ದಾರೆ. ಈ ಕುರಿತು ರಾಮನಗರ ಠಾಣೆಯಲ್ಲಿ ಕೇಸ್​ ದಾಖಲಿಸಿಕೊಳ್ಳಲಾಗಿದೆ..

train crash
ರೈಲಿಗೆ ಸಿಲುಕಿ ಮೃತ ಪಟ್ಟ ವ್ಯಕ್ತಿ
author img

By

Published : Apr 8, 2022, 9:31 AM IST

ರಾಮನಗರ : ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಬಸವನಪುರ ಬಳಿ ನಡೆದಿದೆ. ಬೆಂಗಳೂರಿನ ಸುಂಕದಕಟ್ಟೆ ನಿವಾಸಿ ದಿಲೀಪ್ (28) ಸಾವಿಗೀಡಾದ ವ್ಯಕ್ತಿ. ಯುವಕರು ಬೆಂಗಳೂರಿನಿಂದ ಮೈಸೂರಿಗೆ ಕಾರಿನಲ್ಲಿ ಹೊರಟಿದ್ದರು.

ಕುಡಿದ ಅಮಲಿನಲ್ಲಿ ಕಾರು ಚಲಾಯಿಸುತ್ತಿದ್ದರು. ಈ ವೇಳೆ ಪೊಲೀಸರು ವಾಹನ ತಪಾಸಣೆ ನಡೆಸಿದಾಗ ಓರ್ವ ಯುವಕ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿದ್ದಾನೆ. ರಸ್ತೆ ಪಕ್ಕದಲ್ಲೇ ಇದ್ದ ಹಳಿ ದಾಟುವಾಗ ರೈಲಿಗೆ ಸಿಲುಕಿ ಆರೋಪಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಸದ್ಯ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೋರ್ವ ಆರೋಪಿ ಎಸ್ಕೇಪ್ ​ ಆಗಿದ್ದಾನೆ. ಎಸ್ಕೇಪ್ ಆಗಿರುವ ಆರೋಪಿಯ ಪತ್ತೆಗೆ ಪೊಲೀಸ್​ ಅಧಿಕಾರಿಗಳು ಬಲೆ ಬೀಸಿದ್ದಾರೆ. ಈ ಕುರಿತು ರಾಮನಗರ ಠಾಣೆಯಲ್ಲಿ ಕೇಸ್​ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಇಸ್ರೇಲ್​ನಲ್ಲಿ ಭಯೋತ್ಪಾದನಾ ದಾಳಿ : ಇಬ್ಬರು ಮೃತ, 8 ಮಂದಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.