ETV Bharat / state

ರಾಮನಗರದಲ್ಲಿ ಮರ್ಯಾದಾ ಹತ್ಯೆ: ಅನ್ಯಜಾತಿ ಪ್ರೀತಿಗೆ ಹೆತ್ತವರಿಂದ ಕೊಳ್ಳಿ!

author img

By

Published : Oct 16, 2020, 8:50 PM IST

ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಬೆಟ್ಟದಹಳ್ಳಿ ನಿವಾಸಿ ಕೃಷ್ಣಪ್ಪ (48) ಹಾಗೂ ಅವರ ಸಹೋದರನ ಮಗ ಚೇತನ್‌ (21) ಬಂಧಿತ ಆರೋಪಿಗಳಾಗಿದ್ದಾರೆ. ಕೊಲೆಗೆ ಸಹಕರಿಸಿದ ಮತ್ತೊಬ್ಬ ಕಾನೂನಿನ ಸಂಘರ್ಷಕ್ಕೆ ಒಳಗಾದ ಬಾಲಕನನ್ನೂ (ಬಾಲಾಪರಾಧಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ.

maryada hatye
ಮರ್ಯಾದಾ ಹತ್ಯೆ

ರಾಮನಗರ: ಜಿಲ್ಲೆಯಲ್ಲಿ ಮತ್ತೊಬ್ಬರು ಮರ್ಯಾದಾ ಹತ್ಯೆಗೆ ಬಲಿಯಾಗಿದ್ದಾರೆ. ಕೆಳ ಜಾತಿಯ ಹುಡುಗನನ್ನು ಪ್ರೀತಿಸಿದ ಕಾರಣಕ್ಕೆ ಮಗಳನ್ನೇ ಹತ್ಯೆ ಮಾಡಿದ್ದ ತಂದೆ ಮತ್ತು ಯುವತಿಯ ದೊಡ್ಡಪ್ಪನ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಮಾಗಡಿ ತಾಲೂಕಿನ ಕುದೂರು ಹೋಬಳಿಯ ಬೆಟ್ಟದಹಳ್ಳಿ ನಿವಾಸಿ ಕೃಷ್ಣಪ್ಪ (48) ಹಾಗೂ ಅವರ ಸಹೋದರನ ಮಗ ಚೇತನ್‌ (21) ಬಂಧಿತ ಆರೋಪಿಗಳು. ಕೊಲೆಗೆ ಸಹಕರಿಸಿದ ಮತ್ತೊಬ್ಬ ಕಾನೂನಿನ ಸಂಘರ್ಷಕ್ಕೆ ಒಳಗಾದ ಬಾಲಕನನ್ನೂ (ಬಾಲಾಪರಾಧಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್​ 9ರಂದು ಪ್ರಥಮ ಬಿಕಾಂ ವಿದ್ಯಾರ್ಥಿನಿ ಹೇಮಲತಾ (19) ಕಾಣೆ ಆಗಿದ್ದಾಳೆ ಎಂದು ಆಕೆಯ ತಂದೆ ಕೃಷ್ಣಪ್ಪ ಕುದೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದಾದ ಮರು ದಿನವೇ ಅವರ ಸಹೋದರನ ತೋಟದಲ್ಲಿ ಯುವತಿಯ ಶವ ಪತ್ತೆಯಾಗಿತ್ತು.

ಮರ್ಯಾದಾ ಹತ್ಯೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ವರಿಷ್ಠರು

ಒಕ್ಕಲಿಗ ಸಮುದಾಯಕ್ಕೆ ಸೇರಿದ ಹೇಮಲತಾ ಅದೇ ಗ್ರಾಮದ ಕೆಳ ಜಾತಿಗೆ ಸೇರಿದ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಹಿಂದೆಯೂ ರಾಜೀ ಸಂಧಾನ ಕೂಡ ನಡೆದಿತ್ತು. ಮಗಳ ಪ್ರೇಮದ ವಿಷಯದಿಂದ ಸಿಟ್ಟಿಗೆದ್ದ ಕೃಷ್ಣಪ್ಪ ಆಕೆಯನ್ನು ಕೊಲ್ಲುವ ನಿರ್ಧಾರಕ್ಕೆ ಬಂದಿದ್ದರು. ಅ.8ರಂದು ಸಂಬಂಧಿಕರ ಜೊತೆಗೂಡಿ ಆಕೆಯನ್ನು ಹತ್ಯೆ ಮಾಡಿ ಶವವನ್ನು ಸಮೀಪದ ಜಮೀನಿನಲ್ಲಿ ಹೂತಿಟ್ಟಿದ್ದರು. ಮರು ದಿನ ಠಾಣೆಗೆ ಬಂದು ಮಗಳು ಕಾಣೆ ಆಗಿದ್ದಾಗಿ ತಾವೇ ದೂರು ನೀಡಿದ್ದರು ಎಂದು ಕೇಂದ್ರ ವಲಯ ಐಜಿಪಿ ಸೀಮಂತ್ ‌ಕುಮಾರ್‌ ಸಿಂಗ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಕರಣವನ್ನು ಬೇರೆಡೆಗೆ ತಿರುಗಿಸುವ ಸಲುವಾಗಿ ಆರೋಪಿ ಕೃಷ್ಣಪ್ಪ ಯುವತಿಯ ಪ್ರಿಯಕರನ ಮೇಲೆ ಅನುಮಾನ ವ್ಯಕ್ತಪಡಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ. ಯುವತಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಸುದ್ದಿ ಹಬ್ಬಿಸಲಾಗಿತ್ತು. ಹೀಗಾಗಿ, ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ವಿಚಾರಣೆ ನಡೆಸಿದೆವು. ತನಿಖೆ ವೇಳೆ ಯುವತಿಯ ಪೋಷಕರ ನಡೆ ಹಲವು ಅನುಮಾನಗಳಿಗೆ ಕಾರಣವಾಯಿತು. ಯುವತಿಯ ಅಂತ್ಯಕ್ರಿಯೆ ಸಂದರ್ಭವೂ ಅವರಲ್ಲಿ ದುಃಖ ಇರಲಿಲ್ಲ. ಹೀಗಾಗಿ ವಿಚಾರಣೆ ನಡೆಸಿದಾಗ ಪೋಷಕರೇ ಕೊಲೆ ಮಾಡಿರುವ ಸಂಗತಿ ಬೆಳಕಿಗೆ ಬಂತು. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಸಾಧ್ಯತೆ ಇದ್ದು, ಅವರನ್ನೂ ಬಂಧಿಸುವುದಾಗಿ ಎಂದು ರಾಮನಗರ ಎಸ್ಪಿ ಗಿರೀಶ್‌ ಹೇಳಿದರು.

ಅಪಪ್ರಚಾರ ಮಾಡಿದವರ ಮೇಲೂ ಪ್ರಕರಣ: ಹೇಮಲತಾ ಅವರನ್ನು ಅತ್ಯಾಚಾರ ಮಾಡಿ, ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದ್ದವರ ಮೇಲೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆಲವರು ತಾವೇ ತನಿಖೆ ನಡೆಸಿದವರಂತೆ ಪ್ರಕರಣದ ಕುರಿತು ಸಲ್ಲದ ಹೇಳಿಕೆಗಳನ್ನು ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಇದರಿಂದ ಪ್ರಕರಣ ಇನ್ನಷ್ಟು ಜಟಿಲವಾಗಿತ್ತು. ಅಪಪ್ರಚಾರದ ಪೋಸ್ಟ್‌ ಹಾಕಿದ್ದವರನ್ನು ಬಂಧಿಸಲಾಗುವುದು ಎಂದು ಐಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.