ರಾಮನಗರ : ಅಕ್ರಮ ಗಾಂಜಾ ಮಾರಾಟ ಜಾಲ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬಿಡದಿ ಈಗಲ್ ಟನ್ ರೆಸಾರ್ಟ್ ಬಳಿ ವಿದೇಶಿ ಪ್ರಜೆ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೆರಡು ಗಾಂಜಾ ಪ್ರಕರಣವನ್ನ ಪೊಲೀಸರು ಭೇದಿಸಿದ್ದಾರೆ.
ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸನಹಳ್ಳಿ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 1 ಕೆ.ಜಿ 717 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಮತ್ತೊಂದು ಪ್ರಕರಣದಲ್ಲಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬಾಸಾಹೇಬರ ಪಾಳ್ಯಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿಯನ್ನ ಬಂಧಿಸಲಾಗಿದೆ. ಬಂಧಿತನಿಂದ 1 ಕೆಜಿ 790 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ.