ETV Bharat / state

'₹5 ಕೋಟಿ ವೆಚ್ಚದಲ್ಲಿ ಮಾಗಡಿ ಶ್ರೀರಂಗನಾಥ ಸ್ವಾಮಿ ದೇಗುಲ ಜೀರ್ಣೋದ್ಧಾರ' - ಈಟಿವಿ ಭಾರತ್​ ಕನ್ನಡ

ಬಿಜೆಪಿ ಸರ್ಕಾರ ರಾಜ್ಯದ ಶ್ರದ್ಧಾಕೇಂದ್ರಗಳ ಸಂರಕ್ಷಣೆ ಮತ್ತು ಪುನಶ್ಚೇತನಕ್ಕೆ ಬದ್ಧವಾಗಿದೆ. ಇದು ನಮ್ಮ ಪಕ್ಷದ ಮೂಲ ಆಶಯಗಳಲ್ಲಿ ಒಂದು ಎಂದು ಸಚಿವ ಡಾ ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿದರು.

magadi-ranganatha-swamy-temple
ಸಚಿವ ಅಶ್ವಥನಾರಾಯಣ
author img

By

Published : Aug 1, 2022, 7:48 PM IST

ರಾಮನಗರ: ಪುರಾಣಪ್ರಸಿದ್ಧ ಮಾಗಡಿಯ ಶ್ರೀರಂಗನಾಥ ಸ್ವಾಮಿ ದೇವಸ್ಥಾನವನ್ನು 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ ತಿಳಿಸಿದರು. ಇಂದು ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ರಾಜ್ಯದಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯ ಉದ್ಯಮ ಅಭಿವೃದ್ಧಿಗೆ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸಿದೆ. ಅದರಂತೆ ಪ್ರವಾಸೋದ್ಯಮ ವಿಷನ್ ಗ್ರೂಪ್ ನೀಡಿರುವ ಸಲಹೆ ಪ್ರಕಾರ, ಮಾಗಡಿ ರಂಗನಾಥ ದೇಗುಲವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು. ಈ ದೇವಸ್ಥಾನದಲ್ಲಿರುವ ಉದ್ಭವಮೂರ್ತಿ ಮತ್ತು ರಂಗನಾಥನ ಪ್ರತಿಮೆಗಳು ಭಕ್ತರ ಪಾಲಿಗೆ ನೆಮ್ಮದಿಯ ತಾಣಗಳಾಗಿವೆ. ಮಾಗಡಿಯ ಆಕರ್ಷಣೆಯನ್ನು ಹೆಚ್ಚಿಸುವ ರೀತಿಯಲ್ಲಿ ದೇವಸ್ಥಾನದ ಅಭಿವೃದ್ದಿ ನಡೆಯಲಿದೆ ಎಂದು ಭರವಸೆ ನೀಡಿದರು.

ಶಾಸಕ ಮಂಜುನಾಥ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

ಇದನ್ನೂ ಓದಿ: ಹಾವೇರಿ: ಜೀವಂತ ನಾಗನಿಗೆ ಹಾಲೆರೆದು ಪೂಜೆ ಸಲ್ಲಿಸಿದ ಭಕ್ತರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.