ರಾಮನಗರ: ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಜಾರಿಗೆ ತರುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದರ ಕರಾಳ ದಿನಗಳು ಗತಿಸಿ 45 ವರ್ಷಗಳಾಗಿದೆ. ಇಂದಿಗೂ ಬಿಜೆಪಿ ಅದನ್ನು ಆಚರಿಸುತ್ತಾ ಬಂದಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ಥ್ ನಾರಾಯಣ ತಿಳಿಸಿದರು.
ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕರಾಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಜಾರಿಗೆ ತಂದ ತುರ್ತು ಪರಿಸ್ಥಿತಿ, ಪತ್ರಿಕಾ ಸ್ವಾತಂತ್ರ್ಯಹರಣ ಜೊತೆಗೆ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿತ್ತು ಎಂದರು.
ರಾತ್ರೋರಾತ್ರಿ ತುರ್ತು ಪರಿಸ್ಥಿತಿ ಹೇರಿ ಕಾಂಗ್ರೆಸ್ ಅಕ್ರಮವಾಗಿ ಚುನಾವಣೆಯಲ್ಲಿ ಗೆಲುವು ಪಡೆದಿತ್ತು. ಅವರ ಭ್ರಷ್ಟಾಚಾರ ದೌರ್ಜನ್ಯ ದಬ್ಬಾಳಿಕೆ ವಿರುದ್ಧ ಅಂದಿನಿಂದ ಈವರೆಗೂ ಕರಾಳ ದಿನ ಆಚರಿಸುತ್ತಿದ್ದೇವೆ ಎಂದು ಅಶ್ವತ್ಥ್ ನಾರಾಯಣ ಹೇಳಿದರು.
ಬಿಜೆಪಿಯಲ್ಲಿ ಅಧ್ಯಕ್ಷ ಗಾದಿಗೆ ಪೈಪೋಟಿ
ಬಿಜೆಪಿಯಲ್ಲಿ ಅಧ್ಯಕ್ಷಗಾದಿಗೆ ಪೈಪೋಟಿ ಇಲ್ಲ. ಹಿಂದೆ ಕೂಡ ಜಿಲ್ಲಾಧ್ಯಕ್ಷನಾಗಿದ್ದೆ. ಹೈಕಮಾಂಡ್ ಆದೇಶದಂತೆ ಪಕ್ಷ ಸಂಘಟನೆ ಮಾಡುತ್ತೇವೆ. ಯಾರೇ ಅಧ್ಯಕ್ಷರಾದರೂ ಪಕ್ಷ ಬೆಳೆಸುವುದಷ್ಟೇ ಗುರಿ. ಕಳೆದ ಚುನಾವಣೆ ವೇಳೆ ಅವಕಾಶ ಬಿಟ್ಟುಕೊಡಿ ಎಂದಿದ್ದರು. ಬಿಟ್ಟುಕೊಟ್ಟಿದ್ದೆ. ಈಗ ಜವಾಬ್ದಾರಿ ಕೊಟ್ಟಿದ್ದಾರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹುಲಿವಾಡಿ ದೇವರಾಜ್ ತಿಳಿಸಿದರು.