ರಾಮನಗರ: ಸುಮಾರು 300ಕ್ಕೂ ಅಧಿಕ ಬಾಳೆ ಗಿಡಗಳನ್ನು ದುಷ್ಕರ್ಮಿಗಳು ನಾಶಪಡಿಸಿರುವ ಘಟನೆ ರಾಮನಗರ ತಾಲೂಕಿನ ಮಾಗಡಿ ರಸ್ತೆಯಲ್ಲಿರುವ ತಿಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ರೈತ ರಾಜಣ್ಣ ಎಂಬುವರಿಗೆ ಸೇರಿದ ತೋಟ ಇದಾಗಿದೆ. ರಾಜಣ್ಣ ಬೆಳಗ್ಗೆ ತೋಟಕ್ಕೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಯಾರು? ಯಾವ ಕಾರಣಕ್ಕೆ ಇಂತಹ ಕೃತ್ಯ ಎಸಗಿದ್ದಾರೋ ಗೊತ್ತಿಲ್ಲ. ನಮಗೆ ಯಾರ ಮೇಲೂ ಯಾವುದೇ ಅನುಮಾನವಿಲ್ಲ. ಆದರೆ ಮಕ್ಕಳಂತೆ ಸಾಕಿದ್ದ ಬಾಳೆ ಗಿಡಗಳನ್ನು ಪಾಪಿಗಳು ಕಡಿದು ಹಾಕಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ ರಾಜಣ್ಣ.
ಬಾಳೆ ಗೊನೆಗಳು ಕಟಾವಿಗೆ ಬಂದಿದ್ದವು. ಬಾಳೆಯಿಂದ ಉತ್ತಮ ಆದಾಯದ ನಿರೀಕ್ಷೆಯೂ ಇತ್ತು. ಈ ಘಟನೆಯಿಂದ ತುಂಬಾ ತೊಂದರೆ ಅನುಭವಿಸುವಂತಾಗಿದೆ ಎಂದು ನೊಂದು ನುಡಿದ ರೈತ, ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇನೆ ಎಂದರು.