ETV Bharat / state

ಮರ್ಯಾದೆಗೆ ಅಂಜಿ ಸ್ವಾಮೀಜಿ ಆತ್ಮಹತ್ಯೆ?.. ಡೆತ್​ನೋಟ್​ನಲ್ಲಿರುವುದು ಏನು?

ಮರ್ಯಾದೆಗೆ ಅಂಜಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ವಾಮೀಜಿ ಮೂರು ಪುಟಗಳ ಡೆತ್​ನೋಟ್​ನಲ್ಲಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.

Basavalinga Swamiji committed suicide  Bandemath Basavalinga Swamiji committed suicide  death note found  Basavalinga Swamiji committed suicide news  ಮರ್ಯಾದೆಗೆ ಅಂಜಿ ಸ್ವಾಮೀಜಿ ಆತ್ಮಹತ್ಯೆ  ಸ್ವಾಮೀಜಿ ಮೂರು ಪುಟಗಳ ಡೆತ್​ನೋಟ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ  ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ  ತಾಜ್ಯ ವಸ್ತು ವಿಲೇವಾರಿ ಘಟಕ  ಸ್ವಾಮೀಜಿ ಅಂತಿಮ ದರ್ಶನ
ಮರ್ಯಾದೆಗೆ ಅಂಜಿ ಸ್ವಾಮೀಜಿ ಆತ್ಮಹತ್ಯೆ
author img

By

Published : Oct 24, 2022, 1:50 PM IST

ರಾಮನಗರ: ಮಾಗಡಿ ತಾಲೂಕಿನ ಸೋಲೂರು ಬಳಿಯ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠದ ಕೊಠಡಿಯೊಂದರ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇದರ ಮಧ್ಯೆ ಸ್ವಾಮೀಜಿ ಡೆತ್​ನೋಟ್​ ಲಭ್ಯವಾಗಿದೆ.

ಮರ್ಯಾದೆಗೆ ಅಂಜಿ ಸ್ವಾಮೀಜಿ ಆತ್ಮಹತ್ಯೆ?: ಮಾಗಡಿ ತಾಲೂಕಿನ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಪುಟಗಳ ಡೆತ್‌ ನೋಟ್ ಬರೆದಿಟ್ಟು ಮಠದ ತಮ್ಮ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್​ನೋಟ್​ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗ್ತಿದೆ.

ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ ಖ್ಯಾತಿ ಪಡೆದಿರುವ ಕಂಚುಗಲ್​ ಬಂಡೆಮಠದ ಆವರಣದಲ್ಲಿ ಶಾಲಾ ಕಾಲೇಜುಗಳಿವೆ. 50ಕೋಟಿಗೂ ಹೆಚ್ಚು ಮೌಲ್ಯ ಹೊಂದಿರುವ ಈ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮಠ ತಾಜ್ಯ ವಸ್ತು ವಿಲೇವಾರಿ ಘಟಕಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಅನೇಕ ಉತ್ತಮ ಕಾರ್ಯಕ್ರಮಗಳನ್ನು ಮಾಡಿ ಸಮಾಜಕ್ಕೆ ಮಾದರಿ ಮಠವಾಗಿಯೂ ಇದು ಬೆಳೆದಿದೆ. ಆದ್ರೆ ಕೆಲ ದಿನಗಳಿಂದ ಸ್ವಾಮೀಜಿಗಳ ವಿರುದ್ಧ ಕೆಲ ಆರೋಪಗಳು ಕೇಳಿ ಬಂದಿದ್ದವು. ಇದಕ್ಕೆ ಹೆದರಿ ಸ್ವಾಮೀಜಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸ್ವಾಮೀಜಿ ಅಂತಿಮ ದರ್ಶನ: ಸ್ವಾಮೀಜಿ ನಿಧನ ಹಿನ್ನೆಲೆ ಹಲವು ಮಠಾಧೀಶರು ಮಠಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇನ್ನು, ಡೆತ್​ನೋಟ್​ನಲ್ಲಿರುವ ಕೆಲವು ಮಾಹಿತಿಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಕೆಲ ವೈಯಕ್ತಿಕ ಕಾರಣಗಳಿಂದ ಬೇಸತ್ತು ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಪೊಲೀಸರ ತನಿಖೆ ನಂತರ ಸತ್ಯ ಬಯಲಾಗಲಿದೆ.

ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿಯವರು ಚನ್ನಮಲ್ಲಯ್ಯ, ಪುಟ್ಟಗೌರಮ್ಮರ ಎಂಟನೇ ಪುತ್ರರಾಗಿದ್ದಾರು. ಶ್ರೀಗಳು ಸೇರಿದಂತೆ 5 ಮಂದಿ ಗಂಡು, 3 ಮಂದಿ ಹೆಣ್ಣು ಮಕ್ಕಳಿದ್ದರು. 1 ರಿಂದ 8 ನೇ ತರಗತಿಯವರೆಗೂ ಬಂಡೇಮಠದಲ್ಲೇ ವಿದ್ಯಾಭ್ಯಾಸ ಮಾಡಿದ ನಂತರ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಸಿದ್ದಗಂಗಾ ಮಠಕ್ಕೆ ತೆರಳಿದ್ದರು. ಶ್ರೀಗಳು ಮಠದಲ್ಲೇ ವೇದ, ಉಪನಿಷತ್, ವಿದ್ವತ್ ವ್ಯಾಸಂಗ ಮಾಡಿದ್ದರು. ಸ್ವಾಮೀಜಿಗಳ ಹೆಸರಲ್ಲಿ 80 ಎಕರೆ ಜಮೀನು ಇದೆ. ಬಂಡೆಮಠದಲ್ಲಿ ಮರಿಸ್ವಾಮಿಗಳಾಗಿ 25 ವರ್ಷಗಳ ಹಿಂದೆ ಪೀಠ ಅಲಂಕರಿಸಿದ್ದರು. ಇತ್ತೀಚೆಗೆ ಬೆಳ್ಳಿ ಮಹೋತ್ಸವ ಸಹ ಆಚರಣೆ ಮಾಡಿಕೊಂಡಿದ್ದರು.

ಶ್ರೀಗಳು ಬಂಡೇಮಠದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದರು. ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯವರು ಇದೇ ರೀತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ಒಂದು ವರ್ಷವೂ ಆಗಿಲ್ಲ. ಕುದೂರು ಪೊಲೀಸ್‌ ಇನ್ಸ್​ಪೆಕ್ಟರ್ ಎಪಿ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿರಾರು ಮಂದಿ ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ. ಸದ್ಯ ನೆಲಮಂಗಲ ಶವಾಗಾರಕ್ಕೆ ಸ್ವಾಮೀಜಿ ಪಾರ್ಥಿವ ಶರೀರ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮಠದ ಆವರಣದಲ್ಲೇ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಶ್ರೀಗಳು ಮಠದಲ್ಲಿ ನೂತನ ಕಟ್ಟಡದ ಗುದ್ದಲಿ ಪೂಜೆಗೆ ಪ್ಲಾನ್ ಮಾಡಿದ್ದರು. ಮಠದ ಕಟ್ಟಡಕ್ಕೆ ಸರ್ಕಾರದಿಂದ ಹಣ ಸಹ ಮಂಜೂರಾಗಿತ್ತು. ಇದೇ ಬುಧವಾರ 26 ರಂದು ಮಾಜಿ ಸಿಎಂ ಯಡಿಯೂರಪ್ಪನವರು ಗುದ್ದಲಿ ಪೂಜೆ ಮಾಡಬೇಕಿತ್ತು. ನೂತನ ಕಟ್ಟಡದ ಗುದ್ದಲಿ ಪೂಜೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲೇ ಈ ದುರ್ಘಟನೆ ನಡೆದಿದೆ.

ಓದಿ: ರಾಮನಗರ: ನೇಣು ಬಿಗಿದುಕೊಂಡು ಕಂಚುಗಲ್ಲು ಸ್ವಾಮೀಜಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.