ದೊಡ್ಡಬಳ್ಳಾಪುರ/ ರಾಮನಗರ: ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವ್ರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದೊಡ್ಡಬಳ್ಳಾಪುರ ಹಾಗೂ ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸಿಎಂ ಕುಮಾರಸ್ವಾಮಿ ರಾಜೀನಾಮೆಯನ್ನು ನೀಡುವಂತೆ ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಬೆಂಗಳೂರು-ಮೈಸೂರು ಹೆದ್ದಾರಿಯ ಐಜೂರು ಸರ್ಕಲ್ನಲ್ಲಿ ರಾಮನಗರ ಬಿಜೆಪಿ ಜಿಲ್ಲಾ ಘಟಕದಿಂದ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು.