ETV Bharat / state

ಯಾರೇನೇ ಬೊಬ್ಬೆ ಹೊಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಬಿಎಸ್​​ವೈ - ಬಿಜೆಪಿ

ಕೆಲವರು ನಾನೇ ಸಿಎಂ, ನಾನೇ ಉಪಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಅದೆಲ್ಲವೂ ಸಾಧ್ಯವಾಗುವುದಿಲ್ಲ. ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಹೇಳಿದ್ದಾರೆ.

Ravishing Retreat Resort inaugurated by BSY
Ravishing Retreat Resort ಉದ್ಘಾಟಿಸಿd ಬಿಎಸ್​ವೈ
author img

By

Published : Oct 9, 2022, 10:15 PM IST

Updated : Oct 9, 2022, 11:07 PM IST

ರಾಮನಗರ: ರಾಜ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ, ಯಾರು ಏನೇ ಬೊಬ್ಬೆ ಹೊಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ತಿಳಿಸಿದರು.

ರಾಮನಗರ ತಾಲೂಕಿನ ಹರೀಸಂದ್ರ ಗ್ರಾಮದಲ್ಲಿ ತಮ್ಮ ಆಪ್ತ ಕೆಆರ್​ಐಡಿಡಿಎಲ್ ಅಧ್ಯಕ್ಷ ಎಂ. ರುದ್ರೇಶ್ ಮಾಲೀಕತ್ವದ ರವಿಶಿಂಗ್ ರಿಟ್ರೀಟ್ ರೆಸಾರ್ಟ್ (Ravishing Retreat Resort) ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಬಿಎಸ್​​ವೈ, ಭಾರತ್ ಜೋಡೋ ಯಾತ್ರೆಗೆ ಹೆದರಿ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿಲ್ಲ, ಉತ್ತರ ಪ್ರದೇಶದಲ್ಲಿ ಅವರ ಸಹೋದರಿ (ಪ್ರಿಯಾಂಕ ವಾದ್ರ) ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರನ್ನು ಅಭ್ಯರ್ಥಿ ಮಾಡಿದ್ದರು. ಆದರೂ 2 ಸೀಟ್ ಗೆಲ್ಲಲು ಅಗಲಿಲ್ಲ. ಇಡೀ ದೇಶದಲ್ಲಿ ಕಾಂಗ್ರೆಸ್​ನ ಅಡ್ರೆಸ್ ಇಲ್ಲದಂತಾಗಿದೆ. ಎಲ್ಲೋ ಒಂದೆರಡು ಕಡೆ ಇದ್ದು, ಕರ್ನಾಟಕದಲ್ಲಿ ಉಸಿರಾಡುತ್ತಿದೆ. ಹಾಗಾಗಿ ಇಲ್ಲಿಗೆ ಬಂದು ಮನಬಂದಂತೆ ಮಾತನಾಡಿದರೆ ಪ್ರಯೋಜನ ಇಲ್ಲ. ಕರ್ನಾಟಕದಲ್ಲಿಯೂ ಸಹ ಕಾಂಗ್ರೆಸ್​ನವರು ಅಧಿಕಾರಕ್ಕೆ ಬರಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಮತ್ತಷ್ಟು ಬಲಪಡಿಸಲು ತಾವು ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಎರಡು ತಂಡಗಳು ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇವೆ. ಕೆಲವರು ನಾನೇ ಸಿಎಂ, ನಾನೇ ಉಪಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಅದೆಲ್ಲವೂ ಸಾಧ್ಯವಾಗುವುದಿಲ್ಲ. ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

2023ಕ್ಕೆ ಮತ್ತೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆಂದು ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಹಿರಿಯರು. ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ. ಅವರ ಮಗನ ಮೇಲಿನ ಮಮತೆಗೆ ಆ ಮಾತು ಹೇಳಿದ್ದಾರೆ. ಅದನ್ನು ಬೇಡ ಎನ್ನಲು ನಾನ್ಯಾರು ಎಂದು ಹೇಳಿದರು.

ರೈಲಿಗೆ ಟಿಪ್ಪು ಹೆಸರನ್ನು ಬದಲಿಸಿರುವ ವಿಚಾರದಲ್ಲಿ ಬಿಜೆಪಿಯ ದ್ವೇಷದ ರಾಜಕಾರಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ, ಅವರಿಗೆ ಅಲ್ಪಸಂಖ್ಯಾತರ ಓಲೈಕೆ ಮಾಡುವ ಚಟ. ಹಾಗಾಗಿ ಈ ರೀತಿ ಮಾತನಾಡುತ್ತಾರೆ. ರೈಲಿಗೆ ಒಡೆಯರ್ ಹೆಸರು ಇಟ್ಟಿರುವುದನ್ನು ರಾಜ್ಯ, ದೇಶದ ಜನತೆ ಸ್ವಾಗತ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸೇರಿದಂತೆ ಕೆಲವರಿಗೆ ಬೇಸರ ಆಗಿರಬಹುದು ಅಷ್ಟೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಕೊಡಗಿಗೆ ಯಾತ್ರೆ ಹೋಗಿದ್ದರೆ ರಾಹುಲ್ ಗಾಂಧಿಗೆ ಟಿಪ್ಪುವಿನ ಕ್ರೌರ್ಯ ಗೊತ್ತಾಗುತ್ತಿತ್ತು : ಕಟೀಲ್

Last Updated : Oct 9, 2022, 11:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.