ರಾಮನಗರ: ಕನಕಪುರ ತಾಲ್ಲೂಕಿನ ಹಾರೋಬೆಲೆ ಬಳಿಯ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದ ಎಬ್ಬಿಸಿದ್ದು ಇಂದು ಕಪಾಲ ಬೆಟ್ಟಕ್ಕೆ ಬಿಜೆಪಿ ಮುಖಂಡರು ಭೇಟಿ ನೀಡಲಿದ್ದಾರೆ.
ಕಪಾಲ ಬೆಟ್ಟಕ್ಕೆ ಅಧಿಕಾರಿಗಳು ಭೇಟಿ ನೀಡಿ ಕಾಮಗಾರಿ ಸ್ಥಗಿತಗೊಳಿಸಿದ್ದರೆ, ಮತ್ತೊಂದೆಡೆ ಡಿ.ಕೆ.ಶಿವಕುಮಾರ್ ಮತ್ತು ಬಿಜೆಪಿ ಮುಖಂಡರ ನಡುವೆ ವಾಕ್ಸಮರ ಮುಂದುವರೆದಿದೆ. ಇಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿಕುಮಾರ್ ಹಾಗೂ ಜಿಲ್ಲಾಧ್ಯಕ್ಷ ಎಂ. ರುದ್ರೇಶ್ ಭೇಟಿ ನೀಡಲಿದ್ದಾರೆ.
ಸಾರ್ವಜನಿಕರು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ಇಲ್ಲಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಡಿ. 28ರಿಂದ ಸಾತನೂರು ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.