ರಾಮನಗರ : ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಬೊಮ್ಮಸಂದ್ರ ಬಳಿ ನಾಲ್ಕು ಸಜೀವ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.
ಅನುಮಾನಾಸ್ಪದ ವಸ್ತು ಗಮನಿಸಿದ ಸಾರ್ವಜನಿಕರು ಅವುಗಳನ್ನು ಬೆಂಕಿ ಹಾಕಿ ಸುಟ್ಟು ಹಾಕಿದ್ದರು. ನಂತರ ಭಯಗೊಂಡು ಅವರು ಸ್ಥಳೀಯ ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಬಾಂಬ್ ನಿಷ್ಕ್ರೀಯ ದಳ, ಎಫ್ಎಸ್ಎಲ್ ತಂಡ ಪರಿಶೀಲನೆ ನಡೆಸಿದ್ದಾರೆ.
ಸುಮಾರು ಹನ್ನೆರಡು ವರ್ಷಗಳ ಹಿಂದೆ ಮಿಲ್ಟ್ರಿ ಕ್ಯಾಂಪ್ ಹಾಕಿದ್ದ ಸ್ಥಳದಲ್ಲಿ ಈ ವಸ್ತುಗಳು ಪತ್ತೆಯಾಗಿವೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರಿಂದ ತನಿಖೆ ಮುಂದುವರೆದಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ.ಶೆಟ್ಟಿ ಭೇಟಿ ನೀಡಿದ್ದಾರೆ.