ರಾಮನಗರ: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಬಹುಮತ ಸಾಬೀತುಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ರಾಮನಗರದ ಐಜೂರು ವೃತ್ತದಲ್ಲಿ ಜನಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಟಾಕಿ ಹೊಡೆದು, ಸಿಹಿ ಹಂಚಿ ಸಂಭ್ರಮಿಸಿದರು. ಜೊತೆಗೆ ರಾಜ್ಯ ಹಾಗೂ ರಾಷ್ಟ್ರೀಯ ಬಿಜೆಪಿ ನಾಯಕರ ಪರ ಜಯಘೋಷ ಕೂಗಿದರು. ರಾಮನಗರ ಜಿಲ್ಲಾ ಕಾರ್ಯಕರ್ತರು, ಮುಖಂಡರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದರು.