ETV Bharat / state

ರಾಮನಗರ: ಹೃದಯಾಘಾತದಿಂದ ಬಸ್ ಚಾಲಕ ಸಾವು

ರಾತ್ರಿ ಊಟ ಮಾಡಿ ನಿದ್ದೆಗೆ ಜಾರಿದ್ದ ಚಾಲಕ ಆನಂದ್ ಅವರು ಬೆಳಗ್ಗೆ ಶವವಾದ ಘಟನೆ ರಾಮನಗರದಲ್ಲಿ ನಡೆದಿದೆ.

author img

By

Published : Dec 5, 2022, 5:00 PM IST

bus-driver-died-due-to-heart-attack
ರಾಮನಗರ: ಹೃದಯಾಘಾತದಿಂದ ಬಸ್ ಚಾಲಕ ಸಾವು

ರಾಮನಗರ: ಕೆಎಸ್​ಆರ್​ಟಿಸಿ ಬಸ್ ಚಾಲಕನೊಬ್ಬ ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ನಡೆದಿದೆ. ರಾಮನಗರ ಬಸ್ ಘಟಕದ ಚಾಲಕ ಕೆ.ಎನ್. ಆನಂದ್ (47) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ರಾಮನಗರದಿಂದ ಬಸ್ ಹೊರಟಿದ್ದು, ಕನ್ನಮಂಗಲ ಗ್ರಾಮದಲ್ಲಿ ಬಸ್ ನಿರ್ವಾಹಕ ಮತ್ತು ಚಾಲಕ ತಂಗಿದ್ದರು. ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ಕರ್ತವ್ಯಕ್ಕೆ ಹೊರಡಲು ನಿರ್ವಾಹಕ ಕೃಷ್ಣಪ್ಪ ಮಾದರ್, ಚಾಲಕ ಆನಂದ್ ಅವರನ್ನು ಎಚ್ಚರಿಸಲು ಪ್ರಯತ್ನಿಸಿದರಾದರೂ ಎಚ್ಚರಗೊಳ್ಳದ ಕಾರಣ ಹೊದಿಕೆ ಸರಿಸಿ ನೋಡಿದ್ದಾರೆ.

ಈ ವೇಳೆ. ಆನಂದ್ ಮೃತ ಪಟ್ಟಿರುವುದಾಗಿ ತಿಳಿದಿದ್ದು, ತಕ್ಷಣವೇ ನಿರ್ವಾಹಕ ಅಕ್ಕಪಕ್ಕದವರಿಗೆ ವಿಚಾರ ತಿಳಿಸಿದ್ದಾರೆ. ಬಳಿಕ ಗ್ರಾಮಸ್ಥರು ಚನ್ನಪಟ್ಟಣ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಪೊಲೀಸರು ಮತ್ತು ಕೆಎಸ್​ಆರ್​ಟಿಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ಬಳಿಕ ಶವವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ರಾಮನಗರ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಕ್ಕೆ ತರಲಾಯಿತು. ಮಧ್ಯಾಹ್ನದವರಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಿದ್ದು, ಸಂಜೆ ಕ್ಯಾಸಾಪುರ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.

ಆನಂದ್ ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕೂಟಗಲ್ ಹೋಬಳಿ ಘಟಕದ ಅಧ್ಯಕ್ಷರಾಗಿದ್ದರು. ಇವರು ಪತ್ನಿ, ಇಬ್ಬರು ಪುತ್ರಿ, ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಇದನ್ನೂ ಓದಿ:ರಾಮನಗರದಲ್ಲಿ ಟಾಟಾ ಏಸ್ ಪಲ್ಟಿಯಾಗಿ ಮೂವರ ದುರ್ಮರಣ.. ತರಕಾರಿ ತರಲು ಹೊರಟಾಗ ದುರಂತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.